☔ Weather
Bengaluru: ☀️ 24°C | AQI 113
Mysore: ☀️ 22°C | AQI 110
Mangalore: ☀️ 27°C | AQI 172
Bengaluru: ☀️ 24°C | AQI 113
☔ Weather
Bengaluru: ☀️ 24°C | AQI 113
Mysore: ☀️ 22°C | AQI 110
Mangalore: ☀️ 27°C | AQI 172
Bengaluru: ☀️ 24°C | AQI 113

KEA Recruitment 2026: ವಿವಿಧ ಇಲಾಖೆಗಳಲ್ಲಿ 218 ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

KEA Recruitment 2026: Apply Online For 218 Junior Engineer Posts In Karnataka
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ನಿಗಮ ಹಾಗೂ ಇಲಾಖೆಗಳಲ್ಲಿ 218 ಕಿರಿಯ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಗೃಹ ಮಂಡಳಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸೇರಿದಂತೆ ವಿವಿಧ ನಿಗಮ ಮತ್ತು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 218 ಕಿರಿಯ ಎಂಜಿನಿಯರ್ (JE) ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA Recruitment 2026) ಅಧಿಕೃತ ಪ್ರಕಟಣೆ ಹೊರಡಿಸಿದೆ.

ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಅಡಿಯಲ್ಲಿ ಈ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ನಗರಾಭಿವೃದ್ಧಿ ಪ್ರಾಧಿಕಾರಗಳು ಸೇರಿದಂತೆ ವಿವಿಧ ಪ್ರಮುಖ ನಿಗಮಗಳಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ.

ಹುದ್ದೆಗಳ ವಿವರ ಹಾಗೂ ಹಂಚಿಕೆ

  • ಉಳಿಕೆ ಮೂಲ ವೃಂದ: 187 ಕಿರಿಯ ಎಂಜಿನಿಯರ್ ಹುದ್ದೆಗಳು
  • ಕಲ್ಯಾಣ ಕರ್ನಾಟಕ ವೃಂದ: 31 ಕಿರಿಯ ಎಂಜಿನಿಯರ್ ಹುದ್ದೆಗಳು
  • ಒಟ್ಟು ಖಾಲಿ ಹುದ್ದೆಗಳು: 218 ಹುದ್ದೆಗಳು
  • ಪ್ರಮುಖ ಇಲಾಖೆಗಳು: ಕರ್ನಾಟಕ ಗೃಹ ಮಂಡಳಿ (KHB), ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಅಂತರ್ಜಲ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಖನಿಜ ನಿಗಮ ಹಾಗೂ ಕೊಳೆಗೇರಿ ಅಭಿವೃದ್ಧಿ ನಿಗಮ.

ಶೈಕ್ಷಣಿಕ ಅರ್ಹತೆ ಮತ್ತು ಪರೀಕ್ಷಾ ವೇಳಾಪಟ್ಟಿ

  • ವಿದ್ಯಾರ್ಹತೆ: ಸಿವಿಲ್ ಅಥವಾ ಸಂಬಂಧಿತ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ (Diploma) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ಪರೀಕ್ಷಾ ದಿನಾಂಕ: 2027ರ ಜನವರಿ ತಿಂಗಳಲ್ಲಿ ಲಿಖಿತ ಪರೀಕ್ಷೆಗಳು ನಡೆಯಲಿವೆ. ವಿಶೇಷವಾಗಿ ಕನ್ನಡ ಭಾಷಾ ಪರೀಕ್ಷೆಯು ಜನವರಿ 8ರಂದು ಮಾತ್ರ ಪ್ರತ್ಯೇಕವಾಗಿ ನಡೆಸಲಾಗುತ್ತದೆ.

ಇದನ್ನು ಓದಿ: IISc Bengaluru Recruitment 2026: ಐಐಎಸ್ಸಿಯಲ್ಲಿ 7 ಪ್ರಾಜೆಕ್ಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ನವೆಂಬರ್ 19 ಕೊನೆಯ ದಿನ

KEA Recruitment 2026: ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 26, 2026
  • ಅರ್ಜಿ ಶುಲ್ಕ ಪಾವತಿಸಲು ಕಡೇ ದಿನ: ನವೆಂಬರ್ 27, 2026
  • ಹೆಚ್ಚಿನ ಮಾಹಿತಿಗಾಗಿ: ಅಭ್ಯರ್ಥಿಗಳು KEA ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಬಹುದು.