ಕೇಂದ್ರ ಸರ್ಕಾರದ ಸಂಸ್ಥೆಯಾದ ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ (ONGC Recruitment 2026) ಬೃಹತ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ದೇಶಾದ್ಯಂತ ತನ್ನ 24 ಕಾರ್ಯನಿರ್ವಹಣಾ ಕೇಂದ್ರಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.
ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ನೇರ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 10ನೇ ತರಗತಿ ಪಾಸಾದವರಿಂದ ಹಿಡಿದು ಐಟಿಐ, ಡಿಪ್ಲೊಮಾ ಹಾಗೂ ಪದವೀಧರರಿಗೆ ಉದ್ಯೋಗ ಗಿಟ್ಟಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.
ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಹುದ್ದೆಗಳ ವಿವರ ಹಾಗೂ ಅರ್ಹತೆಯ ಮಾಹಿತಿ ಕೆಳಗಿನಂತಿದೆ.
ಹುದ್ದೆಗಳ ವಿವರ ಹಾಗೂ ವಲಯವಾರು ಹಂಚಿಕೆ
- ಪಶ್ಚಿಮ ವಲಯ: 1,166 ಹುದ್ದೆಗಳು
- ಪೂರ್ವ ವಲಯ: 674 ಹುದ್ದೆಗಳು
- ಮುಂಬೈ ವಲಯ: 482 ಹುದ್ದೆಗಳು
- ದಕ್ಷಿಣ ವಲಯ: 269 ಹುದ್ದೆಗಳು
- ಕೇಂದ್ರ ವಲಯ: 267 ಹುದ್ದೆಗಳು
- ಉತ್ತರ ವಲಯ: 191 ಹುದ್ದೆಗಳು
- ಒಟ್ಟು ಖಾಲಿ ಹುದ್ದೆಗಳು: 3,047 ಅಪ್ರೆಂಟಿಸ್ ಹುದ್ದೆಗಳು
ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ
- ವಿದ್ಯಾರ್ಹತೆ: ಲೈಬ್ರರಿ ಅಸಿಸ್ಟೆಂಟ್ ಹುದ್ದೆಗೆ 10ನೇ ತರಗತಿ ಪಾಸಾಗಿರಬೇಕು. ಇತರ ಹುದ್ದೆಗಳಿಗೆ ಸಂಬಂಧಿತ ವಿಭಾಗದಲ್ಲಿ ಐಟಿಐ, ಬಿ.ಕಾಂ, ಬಿ.ಎಸ್ಸಿ, ಬಿಬಿಎ, ಡಿಪ್ಲೊಮಾ ಅಥವಾ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.
- ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.
ಇದನ್ನು ಓದಿ: KEA Recruitment 2026: ವಿವಿಧ ಇಲಾಖೆಗಳಲ್ಲಿ 218 ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸ್ಟೈಫಂಡ್, ಆಯ್ಕೆ ವಿಧಾನ ಮತ್ತು ಅರ್ಜಿ ಶುಲ್ಕ
- ಮಾಸಿಕ ಸ್ಟೈಫಂಡ್: ಆಯ್ಕೆಯಾದ ಅಭ್ಯರ್ಥಿಗಳಿಗೆ ವಿದ್ಯಾರ್ಹತೆಗೆ ಅನುಗುಣವಾಗಿ ಪ್ರತಿ ತಿಂಗಳು ₹8,200 ರಿಂದ ₹12,300 ವರೆಗೆ ಸ್ಟೈಫಂಡ್ ದೊರೆಯಲಿದೆ. ತರಬೇತಿ ಅವಧಿ 12 ತಿಂಗಳು ಇರಲಿದೆ.
- ಆಯ್ಕೆ ಪ್ರಕ್ರಿಯೆ: ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಶೈಕ್ಷಣಿಕ ಅಂಕಗಳ ಮೆರಿಟ್ ಪಟ್ಟಿ, ಮೂಲ ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ನೇರ ಆಯ್ಕೆ ಮಾಡಲಾಗುತ್ತದೆ.
- ಅರ್ಜಿ ಶುಲ್ಕ: ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. NAPS ಅಥವಾ NATS ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು ಒಎನ್‌ಜಿಸಿ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ONGC Recruitment 2026: ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 29, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 20, 2026




