Darshan Case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ್ ಹಾಗೂ ಅವರ ಗ್ಯಾಂಗ್‌ಗೆ ದಿನದಿಂದ ದಿನಕ್ಕೆ ಕಾನೂನು ಸಂಕಷ್ಟ ಹೆಚ್ಚಾಗುತ್ತಿದೆ. ಸೆಷನ್ಸ್ ಕೋರ್ಟ್ ನೀಡಿರುವ ಸೂಚನೆಗಳು ಈಗ ಆರೋಪಿಗಳಲ್ಲಿ ಆತಂಕ ಮೂಡಿಸಿವೆ.
ಈ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್ ಎಸ್. ರಾವ್ ಮಾಫಿ ಸಾಕ್ಷಿಯಾಗಲು ನಿರ್ಧರಿಸಿದ್ದಾರೆ. ಪ್ರದೋಷ್ ನ್ಯಾಯಾಲಯದ ಮುಂದೆ ಸಂಪೂರ್ಣ ಸತ್ಯ ಬಿಚ್ಚಿಡಲು ಮುಂದಾಗಿದ್ದಾರೆ.
ಇದೀಗ ಸೆಷನ್ಸ್ ಕೋರ್ಟ್ ಪ್ರದೋಷ್ ಹೇಳಿಕೆ ದಾಖಲಿಸಿಕೊಳ್ಳಲು ಸೆಪ್ಟೆಂಬರ್ 28ರ ದಿನಾಂಕವನ್ನು ನಿಗದಿಪಡಿಸಿದೆ. ಈ ಬೆಳವಣಿಗೆಯಿಂದ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಇಡೀ ತಂಡಕ್ಕೆ ‘ಮಂಡೆ ಬಿಸಿ’ ಶುರುವಾಗಿದೆ.
ಪ್ರದೋಷ್ ಮಾಫಿ ಅರ್ಜಿ ಸ್ವೀಕರಿಸಿದ ಸೆಷನ್ಸ್ ಕೋರ್ಟ್
ಪ್ರದೋಷ್ (Pradosh) ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್, ಅವರನ್ನು ತನಿಖಾ ಪರ ಸಾಕ್ಷಿಯಾಗಿ ಪರಿಗಣಿಸಲು ಸಮ್ಮತಿಸಿದೆ. ನ್ಯಾಯಾಲಯದ ಈ ತೀರ್ಮಾನ ಪ್ರಕರಣದ ದಿಕ್ಕನ್ನೇ ಬದಲಿಸುವ ಸಾಧ್ಯತೆಯಿದೆ.
ಇದನ್ನು ಓದಿ: Darshan Case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿ ಟ್ವಿಸ್ಟ್; ಹೈಕೋರ್ಟ್ ಜಡ್ಜ್ ಹೇಳಿದ್ದೇನು?
ಸಾಕ್ಷಿಯಾಗಿ ಬದಲಾಗಿರುವ ಪ್ರದೋಷ್ ನೀಡುವ ಹೇಳಿಕೆಗಳು ನಟ ದರ್ಶನ್‌ಗೆ ಹಿನ್ನಡೆಯಾಗಲಿವೆ ಎಂದು ಹೇಳಲಾಗುತ್ತಿದೆ. ಸೆಪ್ಟೆಂಬರ್ 28ರಂದು ನಡೆಯುವ ಹೇಳಿಕೆ ದಾಖಲಾತಿ ಪ್ರಕ್ರಿಯೆ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
ಹೈಕೋರ್ಟ್ ನಲ್ಲೂ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಹಿನ್ನಡೆ
ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಬಾರದು ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 23ರಂದು ಈ ಅರ್ಜಿಯನ್ನು ವಜಾಗೊಳಿಸಿದೆ.
ಸೆಷನ್ಸ್ ಕೋರ್ಟ್ ನೀಡಿದ ಆದೇಶದಲ್ಲಿ ಯಾವುದೇ ಕಾನೂನು ಲೋಪವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಹೀಗಾಗಿ ಹೈಕೋರ್ಟ್‌ನಲ್ಲೂ ದರ್ಶನ್ ತರಹದ ವಕೀಲರಿಗೆ ತೀವ್ರ ಹಿನ್ನಡೆಯಾಗಿದೆ.
Darshan Case: ಸೆಪ್ಟೆಂಬರ್ 28ರ ನಂತರ ಏನಾಗಲಿದೆ?
ಪ್ರದೋಷ್ ನ್ಯಾಯಾಲಯದಲ್ಲಿ ಯಾವ ರೀತಿಯ ಪ್ರಮುಖ ಸಂಗತಿಗಳನ್ನು ಬಾಯ್ಬಿಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಅವರು ನೀಡುವ ಹೇಳಿಕೆ ಆಧಾರದ ಮೇಲೆ ಮುಂದಿನ ವಿಚಾರಣೆ ನಡೆಯಲಿದೆ.
ಇದಾದ ನಂತರ ದರ್ಶನ್ ಪರ ವಕೀಲರು ಪ್ರದೋಷ್ ಅವರನ್ನು ಯಾವ ರೀತಿ ಪ್ರತಿಪ್ರಶ್ನೆ (Cross Examination) ಮಾಡಲಿದ್ದಾರೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.




