CPRI Recruitment 2026: ಕೇಂದ್ರ ಸರ್ಕಾರದ ವಿದ್ಯುತ್ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರಿನ ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆಯು (CPRI) ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 110 ವಿವಿಧ ಎಕ್ಸಿಕ್ಯೂಟಿವ್ ಮತ್ತು ನಾನ್-ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಸೇರಿದಂತೆ ದೇಶದ ವಿವಿಧ ಸಿಪಿಆರ್‌ಐ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ.
ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 12 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಖಾಲಿ ಇರುವ ಹುದ್ದೆಗಳ ವಿವರ
ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ಒಟ್ಟು 110 ಹುದ್ದೆಗಳು ಖಾಲಿ ಇವೆ.
- ಟೆಕ್ನಿಕಲ್ ಅಟೆಂಡೆಂಟ್ ಗ್ರೇಡ್-1: 37 ಹುದ್ದೆಗಳು
- ಅಸಿಸ್ಟೆಂಟ್ ಗ್ರೇಡ್-II: 29 ಹುದ್ದೆಗಳು
- ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS): 14 ಹುದ್ದೆಗಳು
- ಇಂಜಿನಿಯರಿಂಗ್ ಅಸಿಸ್ಟೆಂಟ್: 11 ಹುದ್ದೆಗಳು
- ಟೆಕ್ನಿಷಿಯನ್ ಗ್ರೇಡ್-1: 9 ಹುದ್ದೆಗಳು
- ಇಂಜಿನಿಯರಿಂಗ್ ಆಫೀಸರ್ ಗ್ರೇಡ್-1: 8 ಹುದ್ದೆಗಳು
- ಸೈಂಟಿಫಿಕ್ ಅಸಿಸ್ಟೆಂಟ್: 2 ಹುದ್ದೆಗಳು
ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ
ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೊಮಾ, ಪದವಿ, ಬಿ.ಇ / ಬಿ.ಟೆಕ್ ಅಥವಾ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು. ಇಂಜಿನಿಯರಿಂಗ್ ಆಫೀಸರ್ ಹುದ್ದೆಗೆ ಗೇಟ್ (GATE) ಸ್ಕೋರ್ ಕಡ್ಡಾಯವಾಗಿದೆ.
ಇದನ್ನು ಓದಿ: KEA AYUSH 2026: ಆಯುರ್ವೇದ, ಹೋಮಿಯೋಪತಿ ಸೀಟು ಹಂಚಿಕೆ ಆಪ್ಷನ್ ಎಂಟ್ರಿ ಆರಂಭ
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ ವಯೋಮಿತಿ 25 ರಿಂದ 35 ವರ್ಷಗಳಾಗಿದ್ದು, ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಸಿಗಲಿದೆ.
ಅರ್ಜಿ ಶುಲ್ಕ ಮತ್ತು ಪ್ರಮುಖ ದಿನಾಂಕಗಳು
ಸಾಮಾನ್ಯ, OBC ಹಾಗೂ EWS ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ₹700 ಅಥವಾ ₹1,000 ಅರ್ಜಿ ಶುಲ್ಕವಿದೆ. ಎಸ್‌ಸಿ, ಎಸ್‌ಟಿ, ಅಂಗವಿಕಲ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಅರ್ಜಿ ಸಲ್ಲಿಕೆ ಈಗಾಗಲೇ ಸೆಪ್ಟೆಂಬರ್ 19 ರಿಂದ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 12 ಕೊನೆಯ ದಿನಾಂಕವಾಗಿದೆ. ಪರೀಕ್ಷಾ ಕೇಂದ್ರಗಳು ಬೆಂಗಳೂರು, ಹೈದರಾಬಾದ್, ಭೋಪಾಲ್, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಇರಲಿವೆ.
CPRI Recruitment 2026: ಆಯ್ಕೆ ವಿಧಾನ ಮತ್ತು ಸಂಬಳ
ಗೇಟ್ ಸ್ಕೋರ್, ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ಕೌಶಲ್ಯ ಪರೀಕ್ಷೆ ಅಥವಾ ಟ್ರೇಡ್ ಟೆಸ್ಟ್ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಪ್ರಕಾರ ಲೆವೆಲ್-1 ರಿಂದ ಲೆವೆಲ್-7 ರವರೆಗೆ ಅಂದರೆ ₹18,000 ರಿಂದ ₹1,42,400 ವರೆಗೆ ಮಾಸಿಕ ವೇತನ ಸಿಗಲಿದೆ. ಆಸಕ್ತರು CPRI ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.




