☔ Weather
Bengaluru: ☀️ 20°C | AQI 89
Mysore: ☀️ 21°C | AQI 88
Mangalore: ☀️ 25°C | AQI 134
Bengaluru: ☀️ 20°C | AQI 89
☔ Weather
Bengaluru: ☀️ 20°C | AQI 89
Mysore: ☀️ 21°C | AQI 88
Mangalore: ☀️ 25°C | AQI 134
Bengaluru: ☀️ 20°C | AQI 89

RAHUL GANDHI: ರಾಹುಲ್ ಗಾಂಧಿ ಬೆಂಗಾವಲು ವಾಹನ ಸರಣಿ ಅಪಘಾತ

Image of Rahul gandhi
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಬೆಂಗಾವಲು ತಂಡದ ವಾಹನಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದುಕೊಂಡಿವೆ.

ಮುಖ್ಯಾಂಶಗಳು

  • ರಾಹುಲ್ ಗಾಂಧಿ ಬೆಂಗಾವಲು ವಾಹನ ಅಪಘಾತ
  • ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ

ಉತ್ತರ ಪ್ರದೇಶ : ಸುಲ್ತಾನ್‌ಪುರ ಜಿಲ್ಲೆಯ ಬಳಿ ಹಾದು ಹೋಗುವ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಬೆಂಗಾವಲು ತಂಡದ ವಾಹನಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದುಕೊಂಡಿವೆ. ಎಕ್ಸ್‌ಪ್ರೆಸ್‌ವೇಯಲ್ಲಿ ಸಾಗುತ್ತಿದ್ದ ವೇಳೆ ಬೆಂಗಾವಲು ಪಡೆಯ ಹಿಂಭಾಗದಲ್ಲಿ ಚಲಿಸುತ್ತಿದ್ದ ವಾಹನಗಳು ಏಕಾಏಕಿ ನಿಯಂತ್ರಣ ಕಳೆದುಕೊಂಡು ಸರಣಿ ರೂಪದಲ್ಲಿ ಅಪಘಾತಕ್ಕೀಡಾಗಿವೆ ಎಂದು ತಿಳಿದುಬಂದಿದೆ. ಈ ಅವಘಡದಲ್ಲಿ ರಾಹುಲ್ ಗಾಂಧಿ ಅವರಿಗೆ ಯಾವುದೇ ರೀತಿಯ ಗಾಯವಾಗಿಲ್ಲ, ಅವರು ಸಂಪೂರ್ಣ ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಅಪಘಾತ ಸಂಭವಿಸಿದ ಕೂಡಲೇ ಅಲ್ಲಿದ್ದ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ.

ಅಪಘಾಯದಲ್ಲಿ ಅಪಾಯದಿಂದ ಬಚಾವ್..!

ಈ ಸರಣಿ ಡಿಕ್ಕಿಯಿಂದ ಬೆಂಗಾವಲು ಪಡೆಯ ಕೆಲವು ವಾಹನಗಳಿಗೆ ಹಾನಿಯಾಗಿದೆ. ಆದರೂ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ ಎಂಬುದು ಸಮಾಧಾನದ ವಿಷಯ. ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ರಾಹುಲ್ ಗಾಂಧಿ ಅವರು ತಮ್ಮ ನಿಗದಿತ ಪ್ರಯಾಣವನ್ನು ಯಾವುದೇ ಅಡಚಣೆ ಇಲ್ಲದೆ ಮುಂದುವರಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು, ಎಷ್ಟು ವಾಹನಗಳು ಇದರಲ್ಲಿ ಭಾಗಿಯಾಗಿವೆ ಎಂಬ ಬಗ್ಗೆ ಇನ್ನೂ ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ವಿವರಗಳು ಹೊರಬರಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಮೋದಿನೂ ಹೋಗ್ಬೇಕು.. ಅವರಪ್ಪನೂ ಹೋಗ್ಬೇಕು- ಖರ್ಗೆ ಹೇಳಿಕೆಯಿಂದ ರಾಜಕೀಯ ಕದನ ತೀವ್ರ

ದೇಶದ ಪ್ರಮುಖ ನಾಯಕರೊಬ್ಬರ ಬೆಂಗಾವಲು ಪಡೆಯಲ್ಲಿಯೇ ಇಂತಹ ಸರಣಿ ಅಪಘಾತ ಸಂಭವಿಸಿರುವುದು ಎಕ್ಸ್‌ಪ್ರೆಸ್‌ವೇಗಳಲ್ಲಿನ ಸುರಕ್ಷತಾ ವ್ಯವಸ್ಥೆ ಮತ್ತು ಬೆಂಗಾವಲು ವಾಹನಗಳ ವೇಗದ ನಿಯಂತ್ರಣದ ಬಗ್ಗೆ ಮತ್ತೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಹೆಚ್ಚಿನ ವೇಗದಲ್ಲಿ ಸಾಗುವಾಗ ವಾಹನಗಳ ನಡುವೆ ಸಾಕಷ್ಟು ಅಂತರ ಕಾಯ್ದುಕೊಳ್ಳದಿದ್ದರೆ ಇಂತಹ ಘಟನೆಗಳು ಸಂಭವಿಸುವ ಸಾಧ್ಯತೆ ಹೆಚ್ಚು. ಅದರಲ್ಲೂ ವಿಐಪಿ ಬೆಂಗಾವಲು ಪಡೆಗಳು ಒಟ್ಟಿಗೆ ಸಾಗುವಾಗ ಚಾಲಕರ ನಡುವೆ ಸಮನ್ವಯತೆ ಅತ್ಯಂತ ಮುಖ್ಯವಾಗುತ್ತದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗದಿರುವುದು ಅದೃಷ್ಟವೆನ್ನಬಹುದು , ಆದರೆ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂಬುದು ಈ ಪ್ರಕರಣದಿಂದ ಸ್ಪಷ್ಟವಾಗುತ್ತದೆ.