☔ Weather
Bengaluru: 🌤️ 22°C | AQI 90
Mysore: ☀️ 22°C | AQI 109
Mangalore: 🌤️ 27°C | AQI 140
Bengaluru: 🌤️ 22°C | AQI 90
☔ Weather
Bengaluru: 🌤️ 22°C | AQI 90
Mysore: ☀️ 22°C | AQI 109
Mangalore: 🌤️ 27°C | AQI 140
Bengaluru: 🌤️ 22°C | AQI 90

PM MODI : ಬ್ಯಾಲೆಟ್ ಪೇಪರ್ ಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಬಿಗ್ ಜೀರೋ, ಮೋದಿ ವ್ಯಂಗ್ಯಾಸ್ತ್ರ

Image of PM Modi
ಕಾಂಗ್ರೆಸ್ ಪಕ್ಷವನ್ನು ಪ್ರಧಾನಿ ಮೋದಿ (PM Modi) ನಯವಾಗಿ ಕಾಲೆಳೆದಿದ್ದಾರೆ. ಕರ್ನಾಟಕ, ಉತ್ತರ ಪ್ರದೇಶ, ಬಿಹಾರ & ಮಹಾರಾಷ್ಟ್ರ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರಾಶೆ ಎದುರಾಗಿದೆ

ಮುಖ್ಯಾಂಶಗಳು

  • ಬ್ಯಾಲೆಟ್ ಪೇಪರ್ ನಲ್ಲೂ ಕಾಂಗ್ರೆಸ್ ಟುಸ್
  • ಪ್ರಧಾನಿ ಮೋದಿ ವ್ಯಂಗ್ಯಾಸ್ತ್ರ
  • ಕಾಂಗ್ರೆಸ್ ಗೆ ತೀವ್ರ ಮುಖಭಂಗ

ನವದೆಹಲಿ: ಕಾಂಗ್ರೆಸ್ ಪಕ್ಷವನ್ನು ಪ್ರಧಾನಿ ಮೋದಿ (PM Modi) ನಯವಾಗಿ ಕಾಲೆಳೆದಿದ್ದಾರೆ. ಕರ್ನಾಟಕ, ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರ ಸೇರಿದಂತೆ ನಾಲ್ಕು ದೊಡ್ಡ ರಾಜ್ಯಗಳಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ನಿರಾಶೆ ಎದುರಾಗಿದೆ. ಒಟ್ಟು 28 ಸ್ಥಾನಗಳಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆದಿದ್ದು, ಅದರಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲದೆ ಶೂನ್ಯ ಸಂಪಾದಿಸಿದೆ. ಈ ಫಲಿತಾಂಶವನ್ನು ಮುಂದಿಟ್ಟುಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ವ್ಯಂಗ್ಯಭರಿತ ಪೋಸ್ಟ್ ಹಾಕಿದ್ದಾರೆ. ನಾಲ್ಕು ರಾಜ್ಯಗಳ 28 ಸ್ಥಾನಗಳಿಗೆ ಬ್ಯಾಲೆಟ್ ಪೇಪರ್‌ನಲ್ಲೇ ಚುನಾವಣೆ ನಡೆದಿತ್ತು, ಕಾಂಗ್ರೆಸ್ ಎಷ್ಟು ಸ್ಥಾನ ಗೆದ್ದಿದೆ ಎಂದು ಊಹಿಸಿ ಎಂದು ಅವರು ಪ್ರಶ್ನಿಸಿದ್ದಾರೆ. ಜೊತೆಗೆ ಹುಡುಕುತ್ತಿರುವ ಎಮೋಜಿಯನ್ನು ಬಳಸಿ ಕಾಂಗ್ರೆಸ್ ಗೆಲುವನ್ನು ಹುಡುಕಬೇಕಾದ ಸ್ಥಿತಿ ಬಂದಿದೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಕರ್ನಾಟಕದಲ್ಲೂ ಭಾರೀ ಮುಖಭಂಗ ..!

ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಈ ಸೋಲು ಇನ್ನಷ್ಟು ಭಾರಿ ಹೊಡೆತ ನೀಡಿದೆ. ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ ನಾಲ್ಕೂ ಸ್ಥಾನಗಳನ್ನು ಕಾಂಗ್ರೆಸ್ ಕಳೆದುಕೊಂಡಿದ್ದು, ಬಿಜೆಪಿ ಮತ್ತು ಜೆಡಿಎಸ್ ಒಳಗೊಂಡ ಎನ್‌ಡಿಎ ಮೈತ್ರಿಕೂಟ ಎಲ್ಲವನ್ನೂ ತನ್ನದಾಗಿಸಿಕೊಂಡಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಪಿ. ರಂಗನಾಥ್ ಅವರು 10,810 ಮತಗಳನ್ನು ಪಡೆದು ಕಾಂಗ್ರೆಸ್‌ನ ಪುಟ್ಟಣ್ಣ ಅವರನ್ನು 908 ಮತಗಳ ಅಂತರದಿಂದ ಸೋಲಿಸಿದ್ದಾರೆ. ಪುಟ್ಟಣ್ಣ 9,902 ಮತಗಳಿಗೆ ಸೀಮಿತರಾಗಿದ್ದಾರೆ. ಈಶಾನ್ಯ ಶಿಕ್ಷಕರ, ಆಗ್ನೇಯ ಪದವೀಧರರ ಮತ್ತು ಪಶ್ಚಿಮ ಪದವೀಧರರ ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಸ್ಥಾನಗಳನ್ನು ಉಳಿಸಿಕೊಂಡಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ 4 ಸ್ಥಾನಗಳನ್ನು ಗೆದ್ದಿದ್ದು, ಸಮಾಜವಾದಿ ಪಕ್ಷ 2 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಬಿಹಾರದಲ್ಲಿ ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷ ದರ್ಭಂಗಾ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಹಾಲಿ ಸದಸ್ಯ ಮದನ್ ಮೋಹನ್ ಝಾ ಅವರನ್ನು 324 ಮತಗಳಿಂದ ಸೋಲಿಸಿ ಪರಿಷತ್ತಿಗೆ ಮೊದಲ ಬಾರಿಗೆ ಪ್ರವೇಶ ಪಡೆದಿದೆ.

ಇದನ್ನೂ ಓದಿ : ಆಪರೇಷನ್ ಸಿಂಧೂರ್ ಬಳಿಕ ಮೊದಲ ಆಹ್ವಾನ – ದೆಹಲಿಗೆ ಬರ್ತಾರಾ ಪಾಕ್ ಸಚಿವ..

ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಾ ಬ್ಯಾಲೆಟ್ ಪೇಪರ್‌ಗೆ ಒತ್ತಾಯಿಸುತ್ತಿದ್ದ ಕಾಂಗ್ರೆಸ್‌ಗೆ ಈ ಫಲಿತಾಂಶವೇ ದೊಡ್ಡ ಪ್ರತ್ಯುತ್ತರವಾಗಿದೆ ಎಂಬುದು ಮೋದಿಯವರ ವ್ಯಂಗ್ಯದ ಹಿಂದಿನ ಸಂದೇಶ. ಮತದಾನದ ವಿಧಾನಕ್ಕಿಂತ ಜನರ ನಂಬಿಕೆ ಮತ್ತು ಸಂಘಟನಾ ಶಕ್ತಿಯೇ ನಿರ್ಣಾಯಕ ಎಂಬುದನ್ನು ಈ ಚುನಾವಣೆ ಮತ್ತೊಮ್ಮೆ ತೋರಿಸಿದೆ. ವಿಶೇಷವಾಗಿ ಶಿಕ್ಷಕರು ಮತ್ತು ಪದವೀಧರರಂತಹ ನಿರ್ದಿಷ್ಟ ಮತದಾರ ವರ್ಗದಲ್ಲಿ ಕಾಂಗ್ರೆಸ್‌ಗೆ ನೆಲೆ ಕಳೆದುಕೊಂಡಿರುವುದು ಪಕ್ಷದ ನಾಯಕತ್ವಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ಕರ್ನಾಟಕದಲ್ಲಿ ಸರ್ಕಾರವಿದ್ದರೂ ಪರಿಷತ್ ಚುನಾವಣೆಯಲ್ಲಿ ಗೆಲ್ಲಲು ಆಗದಿರುವುದು ಆಡಳಿತ ವಿರೋಧಿ ಅಲೆಗಿಂತ ಹೆಚ್ಚಾಗಿ ಪಕ್ಷದೊಳಗಿನ ಹೊಂದಾಣಿಕೆ ಕೊರತೆ ಮತ್ತು ಅಭ್ಯರ್ಥಿ ಆಯ್ಕೆಯ ವೈಫಲ್ಯವನ್ನು ಸೂಚಿಸುತ್ತದೆ. ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಕಾಂಗ್ರೆಸ್ ತನ್ನ ಕಾರ್ಯತಂತ್ರವನ್ನು ಮರುಪರಿಶೀಲಿಸಬೇಕಾದ ಅನಿವಾರ್ಯತೆ ಎದುರಾಗಿದೆ.