☔ Weather
Bengaluru: ☀️ 24°C | AQI 113
Mysore: ☀️ 22°C | AQI 110
Mangalore: ☀️ 27°C | AQI 172
Bengaluru: ☀️ 24°C | AQI 113
☔ Weather
Bengaluru: ☀️ 24°C | AQI 113
Mysore: ☀️ 22°C | AQI 110
Mangalore: ☀️ 27°C | AQI 172
Bengaluru: ☀️ 24°C | AQI 113

KEA Recruitment 2026: ಕೆಇಎಯಿಂದ 5431 FDC, SDC ಹುದ್ದೆಗಳಿಗೆ ಅರ್ಜಿ ಆಹ್ವಾನ; ನವೆಂಬರ್ 25 ಕೊನೆಯ ದಿನ

KEA Recruitment 2026: Apply Online For 5,431 FDC And SDC Posts In Karnataka
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 5,431 FDC ಮತ್ತು SDC ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಮುಖ ದಿನಾಂಕಗಳು ಹಾಗೂ ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA Recruitment 2026) ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬೃಹತ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಒಟ್ಟು 5,431 ಪ್ರಥಮ ದರ್ಜೆ (FDC) ಮತ್ತು ದ್ವಿತೀಯ ದರ್ಜೆ (SDC) ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ.

ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಅಡಿಯಲ್ಲಿ ಈ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಭರ್ತಿ ಮಾಡುವಾಗ ಅಭ್ಯರ್ಥಿಗಳು ಯಾವುದೇ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು KEA ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ.

ಹುದ್ದೆಗಳ ವಿವರ ಹಾಗೂ ಹಂಚಿಕೆ

  • ಉಳಿಕೆ ಮೂಲ ವೃಂದ: 2,163 FDC ಹಾಗೂ 2,070 SDC ಹುದ್ದೆಗಳು
  • ಕಲ್ಯಾಣ ಕರ್ನಾಟಕ ವೃಂದ: 563 FDC ಹಾಗೂ 635 SDC ಹುದ್ದೆಗಳು
  • ಒಟ್ಟು ಹುದ್ದೆಗಳು: 5,431 ಹುದ್ದೆಗಳು
  • ಇಲಾಖೆಗಳ ಸಂಖ್ಯೆ: ರಾಜ್ಯ ಸರ್ಕಾರದ ಒಟ್ಟು 33 ಇಲಾಖೆಗಳು

ಪ್ರಮುಖ ದಿನಾಂಕಗಳು ಮತ್ತು ಪರೀಕ್ಷಾ ವೇಳಾಪಟ್ಟಿ

  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ನವೆಂಬರ್ 25, 2026
  • ಶುಲ್ಕ ಪಾವತಿಸಲು ಕಡೇ ದಿನ: ನವೆಂಬರ್ 26, 2026 (ಈ ದಿನಾಂಕಗಳು ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ).
  • ಪರೀಕ್ಷಾ ದಿನಾಂಕಗಳು: 2027ರ ಜನವರಿ 8, 9, 10, 16 ಮತ್ತು 17ರಂದು ಸ್ಪರ್ಧಾತ್ಮಕ ಪರೀಕ್ಷೆಗಳು ನಿಗದಿಯಾಗಿವೆ.

ಇದನ್ನು ಓದಿ: SWR Recruitment 2026: ನೈಋತ್ಯ ರೈಲ್ವೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಆಹ್ವಾನ

KEA Recruitment 2026: ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳು

  • ನಿಖರ ಮಾಹಿತಿ: ಆನ್‌ಲೈನ್ ಅರ್ಜಿ ಭರ್ತಿ ಮಾಡುವುದನ್ನು ಅಭ್ಯರ್ಥಿಗಳು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಹಾಗೂ ನಿಖರ ಮಾಹಿತಿಯನ್ನೇ ತುಂಬಬೇಕು.
  • ಒಳಮೀಸಲಾತಿ: ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ತಮ್ಮ ಒಳಮೀಸಲಾತಿ ಕ್ಲೇಮ್ ಮಾಡಲು ಹೊಸದಾಗಿ ಪಡೆದ ಪ್ರಮಾಣ ಪತ್ರದ (SC-A, SC-B, SC-C) RD ಸಂಖ್ಯೆಯನ್ನು ಮಾತ್ರ ಕಡ್ಡಾಯವಾಗಿ ನಮೂದಿಸಬೇಕು.
  • ಕಾರ್ಯನಿರ್ವಾಹಕ ನಿರ್ದೇಶಕರ ಸಂದರ್ಶನ: KEA ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್.ಪ್ರಸನ್ನ ಐಎಎಸ್ ಅವರು ಅರ್ಜಿ ಭರ್ತಿ ಹಾಗೂ ನೇಮಕಾತಿ ಪ್ರಕ್ರಿಯೆಯ ಬಗ್ಗೆ KeaVikasana YouTube Channel ಮೂಲಕ ಸಮಗ್ರ ಮಾಹಿತಿ ನೀಡಿದ್ದಾರೆ. ಅಭ್ಯರ್ಥಿಗಳು ಇದನ್ನು ವೀಕ್ಷಿಸಬಹುದು.