MEKEDATU: ಮೇಕೆದಾಟು ಅಣೆಕಟ್ಟೆಗೆ ಒಂದೇ ಒಂದು ಕಲ್ಲಿಡಲು ಬಿಡಲ್ಲವಂತೆ – ತಮಿಳುನಾಡು ಬೃಹನ್ನಾಟಕ

ಕರ್ನಾಟಕ ಸರ್ಕಾರ ಪ್ರತಿಷ್ಠಿತವಾಗಿ ಪರಿಗಣಿಸಿರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಕಠಿಣ ನಿಲುವು ಪ್ರದರ್ಶಿಸಿದೆ. ವಿಧಾನಸಭೆಯಲ್ಲಿ ಈ ವಿಚಾರವಾಗಿ ನಡೆದ ಚರ್ಚೆಯ ಸಂದರ್ಭದಲ್ಲಿ, ತಮಿಳುನಾಡು ಜಲಸಂಪನ್ಮೂಲ ಸಚಿವ ಎನ್. ಆನಂದ್ ಅವರು, ಕರ್ನಾಟಕ ಮೇಕೆದಾಟಿನಲ್ಲಿ ಯಾವುದೇ ಕಾರಣಕ್ಕೂ ಅಣೆಕಟ್ಟು ನಿರ್ಮಿಸಲು ಅವಕಾಶ ನೀಡುವುದಿಲ್ಲ ಎಂದು ಸವಾಲು ಹಾಕಿದ್ದಾರೆ. ರಾಜ್ಯದ ಜಲ ಹಕ್ಕನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿಗೆ ಒಂದು ಕಲ್ಲನ್ನೂ ಇಡಲು ಬಿಡುವುದಿಲ್ಲ ಎಂದು ಅವರು ಉದ್ಧಟನ ಮೆರೆದಿದ್ದಾರೆ. ಕಾವೇರಿ […]
CAUVERY DISPUTE : ರೈತರ ಹಿತಾಸಕ್ತಿಯನ್ನು ಬಲಿ ಕೊಡಲ್ಲ – ತಮಿಳುನಾಡಿಗೆ ನೀರು ಬಿಟ್ಟಿಲ್ಲ

ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ರಹಸ್ಯವಾಗಿ ನೀರು ಬಿಡಲಾಗುತ್ತಿದೆ ಎಂಬ ಆರೋಪಗಳಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿ ಕೊಟ್ಟು ನೆರೆಯ ರಾಜ್ಯಕ್ಕೆ ನೀರು ಹರಿಸುವ ಕೆಲಸ ಸರ್ಕಾರ ಎಂದಿಗೂ ಮಾಡುವುದಿಲ್ಲ ಎಂದು ಅವರು ಬೆಂಗಳೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಕಾವೇರಿ ಜಲಾನಯನ ಪ್ರದೇಶದ ನಾಲೆಗಳು ಮತ್ತು ಕುಡಿಯುವ ನೀರಿನ ಅಗತ್ಯತೆಗಾಗಿ ಮಾತ್ರ ನೀರನ್ನು ನಿರ್ವಹಿಸಲಾಗುತ್ತಿದೆಯೇ ಹೊರತು, ಆರೋಪಗಳಂತೆ ಬೇರೆ ಯಾವುದೇ ಉದ್ದೇಶವಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಕಾವೇರಿ ನೀರು […]
DK SHIVAKUMAR: ಅಧಿವೇಶನದ ನಡುವೆಯೇ ದಿಲ್ಲಿಗೆ ಹಾರಿದ ಡಿಕೆಶಿ – ಅಷ್ಟು ಆತುರವೇನಿತ್ತು…?

ರಾಜ್ಯದಲ್ಲಿ ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವ ಸಮಯದಲ್ಲಿಯೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಎಐಸಿಸಿ ವರಿಷ್ಠರ ಆಣತಿಯ ಮೇರೆಗೆ ನಡೆದಿರುವ ಈ ಭೇಟಿ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ವೇಳೆ ಡಿಕೆ ಪಕ್ಷದ ಉನ್ನತ ನಾಯಕರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ, ಖಾತೆಗಳ ಮರುಹಂಚಿಕೆ ಹಾಗೂ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಒಂದೆಡೆ ಅಧಿವೇಶನದ ಬಿಸಿ ಏರುತ್ತಿರುವ ಸಂದರ್ಭದಲ್ಲಿಯೇ ಸಿಎಂ ದೆಹಲಿಯತ್ತ ಮುಖ […]
B NAGENDRA : ಸಿಎಂ ಹೆಸರು ಹೇಳುವಂತೆ ನನ್ನನ್ನು ಒತ್ತಾಯಿಸಿದ್ದರು – ಇಡಿ ವಿರುದ್ಧ ಬಿ. ನಾಗೇಂದ್ರ ಸ್ಫೋಟಕ ಆರೋಪ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತನ್ನನ್ನು ಬಂಧಿಸುವ ಮೂಲಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸಿತ್ತು ಎಂದು ಸಚಿವ ಬಿ. ನಾಗೇಂದ್ರ ತೀವ್ರವಾಗಿ ಕಿಡಿಕಾರಿದ್ದಾರೆ. ಈ ಸಂಬಂಧ ಸ್ವತಃ ಡಿಕೆ ಶಿವಕುಮಾರ್ ಅವರ ಸೂಚನೆ ಮೇರೆಗೆ ಸಚಿವ ಬಿ.ನಾಗೇಂದ್ರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ತನಿಖಾ ಸಂಸ್ಥೆಯು ತನ್ನ ಮೇಲೆ ತೀವ್ರವಾದ ರಾಜಕೀಯ ಒತ್ತಡ ಹೇರಿತ್ತು ಮತ್ತು ಅಂದಿನ ಮುಖ್ಯಮಂತ್ರಿಗಳ […]
PAKISTAN: ಕಾಶ್ಮೀರಕ್ಕೆ 10 ಸಾವಿರ ಭಯೋತ್ಪಾದಕರು – ಸ್ವತಃ ಪಾಕ್ ಧರ್ಮಗುರು ಒಪ್ಪಿಕೊಂಡ ಉಗ್ರ ಸತ್ಯ

ಪಾಕಿಸ್ತಾನದ ಬಹವಾಲ್ಪುರ್‌ನಲ್ಲಿ ನಡೆದ ಸಭೆಯೊಂದರಲ್ಲಿ ಪಾಕ್ ಧರ್ಮಗುರು ನೀಡಿರುವ ಹೇಳಿಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಲಷ್ಕರ್-ಎ-ತೈಬಾ ಸಂಘಟನೆಯ ಸ್ಥಾಪಕ ಹಫೀಜ್ ಸಯೀದ್ ನೇತೃತ್ವದಲ್ಲಿ ಕಾಶ್ಮೀರಕ್ಕೆ ಸಾವಿರಾರು ಯುವಕರನ್ನು ಉಗ್ರರನ್ನಾಗಿ ತರಬೇತಿ ನೀಡಿ ಕಳುಹಿಸಲಾಗಿತ್ತು ಎಂದು ಸ್ವತಃ ಧರ್ಮಗುರು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಈ ವಿಡಿಯೋ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ನೆರೆ ರಾಷ್ಟ್ರದ ಭಯೋತ್ಪಾದಕ ಕೃತ್ಯಗಳ ನಿಜವಾದ ಮುಖವಾಡ ಮತ್ತೊಮ್ಮೆ ಜಗತ್ತಿನೆದುರು ಬೆತ್ತಲಾಗಿದೆ. ಈ ಸ್ಪೋಟಕ ಹೇಳಿಕೆ ಭಾರತದ ದೀರ್ಘಕಾಲದ ನಿಲುವು ಮತ್ತು […]
TRAGEDY: RSS ಕಟ್ಟಾಳು, ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನಕ್ಕೆ ಗಣ್ಯರ ಸಂತಾಪ

ರಾಜ್ಯದ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದ, ಹಿರಿಯ ಬಿಜೆಪಿ ನಾಯಕ ಬಿ.ಸಿ. ನಾಗೇಶ್ (67) ಅವರು ಮಂಗಳವಾರ (ಆ.18) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು, ಜಯನಗರದಲ್ಲಿರುವ ತಮ್ಮ ಪುತ್ರಿಯ ಮನೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬಿ.ಇ. ಪದವೀಧರರಾಗಿದ್ದ ನಾಗೇಶ್ ಅವರು ಆರ್‌ಎಸ್‌ಎಸ್‌ನ ಕಟ್ಟಾ ಕಾರ್ಯಕರ್ತರಾಗಿದ್ದರು. ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ತಮ್ಮ ಆಡಳಿತಾವಧಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಮಹತ್ವದ ಸುಧಾರಣೆಗಳನ್ನು ತಂದಿದ್ದರು. ಅವರ […]
B NAGENDRA: ನಾಗೇಂದ್ರ ರಾಜೀನಾಮೆ ಪ್ರಶೆಯೇ ಇಲ್ಲ – ವಿಪಕ್ಷಗಳ ಬೆಂಕಿಗೆ ತುಪ್ಪ ಸುರಿದ ಸರ್ಕಾರ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿರುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ವಿಚಾರವಾಗಿ ಸ್ಪೀಕರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿಯೂ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಒಮ್ಮತ ಮೂಡಿಲ್ಲ. ಹೀಗಾಗಿ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿರುವ ಬಿಜೆಪಿ, ತನ್ನ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವ ನಿರ್ಧಾರಕ್ಕೆ ಬಂದಿದೆ. ಇತ್ತ ಸರ್ಕಾರ ಮಾತ್ರ ಪ್ರತಿಪಕ್ಷಗಳ ಒತ್ತಾಯಕ್ಕೆ ಮಣಿಯುವ ಪ್ರಶ್ನೆಯೇ […]
HD KUMARASWAMY: ‘ಇಟಲಿ ರಕ್ತ’ ಹೇಳಿಕೆ ವಿವಾದ – ಕುಮಾರಣ್ಣಂಗೆ ಕಾಂಗ್ರೆಸ್ ಡಿಚ್ಚಿ !

ವಂದೇ ಮಾತರಂ ಕುರಿತ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಇಟಲಿ ಮೂಲವನ್ನು ಉಲ್ಲೇಖಿಸಿ ಮಾಡಿದ ಟೀಕೆಗೆ ಕಾಂಗ್ರೆಸ್ ತೀವ್ರ ಪ್ರತಿಕ್ರಿಯೆ ನೀಡಿದೆ. ಸೋನಿಯಾ ಗಾಂಧಿ ಇಟಲಿಯಲ್ಲಿ ಜನಿಸಿರುವುದು ನಿಜವಾದರೂ, ಭಾರತದ ಸೊಸೆಯಾಗಿ ಅವರು ಸಲ್ಲಿಸಿರುವ ಸೇವೆ ಮತ್ತು ಮಾಡಿದ ತ್ಯಾಗವನ್ನು ಪ್ರಶ್ನಿಸುವ ನೈತಿಕ ಹಕ್ಕು ಕುಮಾರಸ್ವಾಮಿ ಅವರಂತಹ ಅವಕಾಶವಾದಿಗಳಿಗೆ ಇಲ್ಲ ಎಂದು ಕಾಂಗ್ರೆಸ್ ತನ್ನ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಹೇಳಿದೆ. ಸೋನಿಯಾ ಗಾಂಧಿಯವರ ದೇಶಭಕ್ತಿಗೆ ಯಾರಿಂದಲೂ […]
KPSC SCAM: ಕೆಪಿಎಸ್‍ಸಿ ನೇಮಕಾತಿ ಅಕ್ರಮ – ‘ಇಡಿ’ ಇಕ್ಕಳದಲ್ಲಿ ಸಿಲುಕಿದ ಶಿವಶಂಕರಪ್ಪ ಸಾಹುಕಾರ್

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‍ಸಿ) ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ, ಆಯೋಗದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ತನಿಖಾ ತಂಡ ಇಂದು (ಆಗಸ್ಟ್ 18) ತನ್ನ ವಶಕ್ಕೆ ಪಡೆದುಕೊಂಡಿದೆ.ಬೆಂಗಳೂರಿನ ಡಾಲರ್ಸ್ ಕಾಲೋನಿಯ ಹೊಯ್ಸಳ ಡ್ರೀಮ್ಸ್ ಅಪಾರ್ಟ್‍ಮೆಂಟ್‍ನಲ್ಲಿರುವ ಅವರ ನಿವಾಸದ ಮೇಲೆ ಬೆಳಗಿನ ಜಾವ ಸುಮಾರು ೬ ಗಂಟೆಗೆ ದಾಳಿ ನಡೆಸಿದ ಇಡಿ ಅಧಿಕಾರಿಗಳು, ಕಡತಗಳ ಸಮಗ್ರ ಪರಿಶೀಲನೆ ನಡೆಸಿದ ಬಳಿಕ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಈ […]
DK SHIVAKUMAR: ಮೊದಲು ನಿಮ್ಮದು ನೀವು ನೋಡ್ಕೊಳ್ಳಿ – ತಮಿಳುನಾಡಿಗೆ ಡಿಕೆ ಖಡಕ್ ಕೌಂಟರ್

ಕರ್ನಾಟಕದ ಆಂತರಿಕ ವಿಚಾರಗಳು ಹಾಗೂ ಆಡಳಿತಾತ್ಮಕ ನಿರ್ಧಾರಗಳಲ್ಲಿ ಅನಗತ್ಯವಾಗಿ ತಲೆಹಾಕುತ್ತಿರುವ ತಮಿಳುನಾಡಿನ ರಾಜಕೀಯ ನಾಯಕರ ಧೋರಣೆಗೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಸ್ವಾಯತ್ತತೆ ಹಾಗೂ ಗೌರವವಿರುತ್ತದೆ. ಹೀಗಿರುವಾಗ ನೆರೆಯ ರಾಜ್ಯದ ನಾಯಕರು ತಮ್ಮ ಗಡಿ ದಾಟಿ ಇತರ ರಾಜ್ಯದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಹಾಗೂ ರಾಜಕೀಯ ಸೌಜನ್ಯಕ್ಕೆ ತದ್ವಿರುದ್ಧವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಪನ್ನೀರ್ ಸೆಲ್ವಂ ಸೇರಿದಂತೆ ಯಾವುದೇ ನಾಯಕರಾಗಿರಲಿ, […]