PRIYANK KHARGE: ಹಿಂದೂ ರಾಷ್ಟ್ರ ಕಲ್ಪನೆಗೆ ಅಂಬೇಡ್ಕರ್ ಏನ್ ಹೇಳಿದ್ರು ಗೊತ್ತಾ..? ಬಿಜೆಪಿಗೆ ಪ್ರಿಯಾಂಕ್ ಪ್ರಶ್ನೆ

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆಗಳನ್ನು ಕೇವಲ ಚುನಾವಣಾ ರಾಜಕೀಯದ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಾಬಾಸಾಹೇಬರಿಗೆ ಕೇವಲ ಪುಷ್ಪನಮನ ಸಲ್ಲಿಸುವುದರೊಂದಿಗೆ ನಿಲ್ಲದೆ, ‘ಹಿಂದೂ ರಾಷ್ಟ್ರ’ ಪರಿಕಲ್ಪನೆಯಿಂದ ದೇಶದ ಪ್ರಜಾಪ್ರಭುತ್ವದ ಮೇಲಾಗುವ ಧಕ್ಕೆಗಳ ಕುರಿತು ಅವರು ನೀಡಿದ್ದ ಗಂಭೀರ ಮುನ್ನೆಚ್ಚರಿಕೆಗಳನ್ನು ಸಹ ಕಮಲ ಪಡೆ ಅತ್ಯಂತ ಸೂಕ್ಷ್ಮವಾಗಿ ಗ್ರಹಿಸಬೇಕಾಗಿದೆ ಎಂದು ಖರ್ಗೆ ಪ್ರತಿಪಾದಿಸಿದ್ದಾರೆ. ಭಾರತದಲ್ಲಿ ಧಾರ್ಮಿಕ ಅಥವಾ ನಿರ್ದಿಷ್ಟ ಕೋಮುವಾದಿ ಆಡಳಿತ ಸ್ಥಾಪನೆಯಾದರೆ […]

R ASHOK : ಕಾಂಗ್ರೆಸ್ ನಲ್ಲಿ ಕಾಸು ಕೊಟ್ಟೋನೆ ಬಾಸು – ಆಡಿಯೋ ಲೀಕ್ ಬಗ್ಗೆ ಅಶೋಕ್ ಲೇವಡಿ

ರಾಜ್ಯ ಸಚಿವ ಸಂಪುಟದ ವಿಸ್ತರಣೆ ಕೇವಲ ಹಣದ ವಹಿವಾಟಿಗೆ ಸೀಮಿತವಾಗಿದೆ ಎಂಬ ತಮ್ಮ ಹಿಂದಿನ ಹೇಳಿಕೆಗೆ ಈಗ ಬಲವಾದ ಆಧಾರ ದೊರೆತಿದೆ ಎಂದು ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸರ್ಕಾರದೊಳಗಿನ ಭ್ರಷ್ಟಾಚಾರಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು ಅಶೋಕ್ ಪೋಸ್ಟ್ ಮಾಡಿದ್ದಾರೆ. ಸದ್ಯ ವೈರಲ್ ಆಗಿರುವ ಈ ಆಡಿಯೋ ತಮ್ಮದಲ್ಲ ಎಂದು ಕಾಂಗ್ರೆಸ್ ನಾಯಕರು ಸುಲಭವಾಗಿ ತಳ್ಳಿಹಾಕುವುದು ಸಾಮಾನ್ಯ. […]

DK SHIVAKUMAR: ಪರಿಷತ್ ಸಭಾಪತಿ ಸ್ಥಾನದ ಕಸರತ್ತು: ತಡರಾತ್ರಿ ಭೇಟಿಯ ಹಿಂದಿನ ರಾಜಕೀಯ ಆಟ

ಬೆಂಗಳೂರಿನಲ್ಲಿ ಬುಧವಾರ (ಆ.5) ತಡರಾತ್ರಿ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಈ ಮಹತ್ವದ ಸಂಧಾನ ಸಭೆಯ ಸಂದರ್ಭದಲ್ಲಿ ಸಂಪುಟದ ಪ್ರಮುಖ ಸಚಿವರಾದ ಯು.ಟಿ. ಖಾದರ್, ಜಮೀರ್ ಅಹ್ಮದ್ ಹಾಗೂ ಸತೀಶ ಜಾರಕಿಹೊಳಿ ಉಪಸ್ಥಿತರಿದ್ದು, ಇಬ್ಬರೂ ನಾಯಕರ ನಡುವಿನ ಸುದೀರ್ಘ ಚರ್ಚೆಗೆ ಸಾಕ್ಷಿಯಾದರು. ಇತ್ತೀಚಿನ ಸಚಿವ ಸಂಪುಟ ಪುನಾರಚನೆಯ ನಂತರ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ […]

BIG UPDATE : ಕಾಂಗ್ರೆಸ್‌ ಅಸಮಾಧಾನಕ್ಕೆ ಹೊಸ ತಿರುವು -ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದದ್ದಲ್ ರಾಜೀನಾಮೆ

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್‌ನಲ್ಲಿ ಅಸಮಾಧಾನ ಮತ್ತಷ್ಟು ಜೋರಾಗುತ್ತಿವೆ. ಈ ಬೆಳವಣಿಗೆಯ ನಡುವೆಯೇ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದು ರಾಜಕೀಯವಾಗಿ ಮಹತ್ವದ ಬೆಳವಣಿಗೆಯಾಗಿದೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ದೊರೆಯದಿರುವುದೇ ತಮ್ಮ ಈ ನಿರ್ಧಾರಕ್ಕೆ ಕಾರಣ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ […]

CABINET: ಕೃಷ್ಣಪ್ಪ ನಿವಾಸಕ್ಕೆ ಡಿಕೆ – ಪಾಟೀಲ್ ನಿವಾಸಕ್ಕೆ ಬಿಕೆ ! ಜೋರಾಯ್ತು ಮನವೊಲಿಸುವ ಕಸರತ್ತು !

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆದ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನದಿಂದ ವಂಚಿತರಾದ ಹಿರಿಯ ನಾಯಕರ ಅಸಮಾಧಾನವನ್ನು ತಣಿಸಲು ಪಕ್ಷದ ನಾಯಕತ್ವ ನಿರಂತರ ಪ್ರಯತ್ನ ನಡೆಸುತ್ತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ಪ್ರಮುಖ ನಾಯಕರು ಎಂ. ಕೃಷ್ಣಪ್ಪ ಹಾಗೂ ಶಾಸಕ ಪ್ರಿಯಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಸುದೀರ್ಘ ಮಾತುಕತೆ ನಡೆಸಿದರು. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ದಿನೇಶ್ ಗುಂಡೂರಾವ್ […]

CONGRESS : ರಾಜೀನಾಮೆ ನಾಟಕಕ್ಕೆ ತೆರೆ – ಎರಡೇ ದಿನಕ್ಕೆ ತಣ್ಣಗಾದ ಯಶವಂತರಾಯಗೌಡ

ರಾಜ್ಯ ಕಾಂಗ್ರೆಸ್ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಚಿವ ಸ್ಥಾನ ಸಿಗದೆ ತೀವ್ರ ಬೇಸರಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಹಿರಿಯ ಶಾಸಕ ಯಶವಂತರಾಯಗೌಡ ಪಾಟೀಲ್ ಅವರ ಅಸಮಾಧಾನವನ್ನು ಶಮನಗೊಳಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಮನನೊಂದು ರಾಜೀನಾಮೆ ಸಲ್ಲಿಸಿದ್ದ ಪಾಟೀಲ್ ಅವರೊಂದಿಗೆ ಡಿಕೆ ನೇರವಾಗಿ ದೂರವಾಣಿ ಮೂಲಕ ಸುದೀರ್ಘ ಮಾತುಕತೆ ನಡೆಸಿ ಸಮಾಧಾನಪಡಿಸಿದ್ದಾರೆ. ಈ ಆಶ್ವಾಸನೆಯ ನಂತರ ಅವರು ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. […]

CABINET: ತನ್ವೀರ್ ಗೆ ಮಂತ್ರಿಗಿರಿ ತಪ್ಪಲು ಸಿದ್ದು ಪುತ್ರವಾತ್ಸಲ್ಯ ಕಾರಣ..! – ಹೆಚ್.ವಿಶ್ವನಾಥ್ ಹೊಸ ಬಾಂಬ್

ರಾಜ್ಯ ರಾಜಕಾರಣದ ಪ್ರಸ್ತುತ ಬೆಳವಣಿಗೆಗಳು, ಸಂಪುಟ ಪುನಾರಚನೆ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ನಿರ್ಧಾರಗಳ ಕುರಿತು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಪುತ್ರ ಡಾ. ಯತೀಂದ್ರ ಅವರ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ವಿಶ್ವನಾಥ್ ಆರೋಪಿಸಿದ್ದಾರೆ. ಸರ್ಕಾರ ಹಾಗೂ ಸಂಘಟನೆಯಲ್ಲಿ ಯತೀಂದ್ರ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸುವ ಉದ್ದೇಶದಿಂದ ಈ ಬೆಳವಣಿಗೆಗಳು ನಡೆದಿವೆ ಎಂದು ವಿಶ್ವನಾಥ್ ಟೀಕಿಸಿದ್ದಾರೆ. […]

CABINET: ಕಾಸು ಕೊಟ್ಟವರಿಗೆ ಮಂತ್ರಿಗಿರಿ – ಕಾಂಗ್ರೆಸ್ ಪಾಳಯದಲ್ಲಿ ಆಡಿಯೋ ಸ್ಫೋಟ !

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಂಪುಟ ಪುನಾರಚನೆಯ ನಂತರದ ರಾಜಕೀಯ ಬೆಳವಣಿಗೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೈರಲ್ ಆಡಿಯೋ ತುಣುಕೊಂದು ಪಕ್ಷದ ಆಂತರಿಕ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಹಾಗೂ ಪಕ್ಷದ ಹಿರಿಯ ನಾಯಕರಾದ ಆರ್ .ಬಿ ತಿಮ್ಮಾಪುರ ಮತ್ತು ಎಸ್.ಜಿ ನಂಜಯ್ಯನಮಠ ಅವರ ನಡುವಿನ ಸಂಭಾಷಣೆ ಎನ್ನಲಾದ ಈ ಧ್ವನಿಸುರುಳಿಯಲ್ಲಿ, ಸಂಪುಟ ವಿಸ್ತರಣೆಯ ನಿರ್ಧಾರಗಳು ಮತ್ತು ನಾಯಕತ್ವದ ನಡೆಗಳ ಕುರಿತು ಅಸಮಾಧಾನ ವ್ಯಕ್ತಪಡಿಸಲಾಗಿದೆ. ಈ ಆಡಿಯೋದಲ್ಲಿ ಪಕ್ಷದಲ್ಲಿ ಹಿರಿಯರನ್ನು ಯಾವ […]

KARNATAKA POLITICS: ನಾನಂತೂ ರಾಜೀನಾಮೆ ಕೊಡಲ್ಲ – ಬಸವರಾಜ ಹೊರಟ್ಟಿ ಯೂಟರ್ನ್

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಘರ್ಷ ಆರಂಭವಾಗಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾಂಗ್ರೆಸ್ ಸರ್ಕಾರದ ಕೋರಿಕೆಯನ್ನು ಬಹಿರಂಗವಾಗಿ ತಳ್ಳಿಹಾಕಿದ್ದಾರೆ. ತಾವು ಯಾವುದೇ ಕಾರಣಕ್ಕೂ ಹುದ್ದೆಗೆ ಸ್ವಯಂಪ್ರೇರಿತವಾಗಿ ರಾಜೀನಾಮೆ ಸಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ನಿಯಮಾನುಸಾರ ಸದನದಲ್ಲಿ ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವಂತೆ ಆಡಳಿತ ಪಕ್ಷಕ್ಕೆ ಬಹಿರಂಗ ಸವಾಲು ಎಸೆದಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹುದ್ದೆಯಿಂದ ಕೆಳಗಿಳಿಯುವಂತೆ ನೀಡಿದ್ದ ಸೂಚನೆಯನ್ನು ನಿರಾಕರಿಸಿರುವ ಹೊರಟ್ಟಿ, ಪ್ರಜಾಸತ್ತಾತ್ಮಕ ನಿಯಮಗಳನ್ನು ಗಾಳಿಗೆ ತೂರಿ […]

SIR : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ – ಕರ್ನಾಟಕದಲ್ಲಿ 1.1 ಕೋಟಿ ಹೆಸರು ಡಿಲೀಟ್..?

ಕರ್ನಾಟಕದಲ್ಲಿ ಕೈಗೊಳ್ಳಲಾದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದು, ಕಳವಳಕಾರಿ ಅಂಶವೊಂದು ಹೊರಬಿದ್ದಿದೆ. ರಾಜ್ಯದ ಒಟ್ಟು ಮತದಾರರ ಪೈಕಿ ಸುಮಾರು ಶೇ. 20ರಷ್ಟು ಅಂದರೆ 1.11 ಕೋಟಿಗೂ ಅಧಿಕ ಮಂದಿ ಮೃತ, ವಿಳಾಸ ಬದಲಾಯಿಸಿದ ಅಥವಾ ದ್ವಿಪ್ರತಿ ವರ್ಗಕ್ಕೆ ಸೇರಿದ ಅನುಮಾನಾಸ್ಪದ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಈ ಪ್ರಮಾಣ ಇಡೀ ದೇಶದಲ್ಲೇ ಅತ್ಯಂತ ಹೆಚ್ಚಾಗಿದ್ದು, ಉತ್ತರ ಪ್ರದೇಶ ಹಾಗೂ ಹರಿಯಾಣದಂತಹ ದೊಡ್ಡ ರಾಜ್ಯಗಳಿಗಿಂತಲೂ ಮುಂಚೂಣಿಯಲ್ಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ನಿಗದಿತ […]