RSS : ಆರ್.ಎಸ್.ಎಸ್ ನಿಂದ ರಾಜ್ಯದಲ್ಲಿ ಶಾಂತಿ ಕದಡುವ ಪ್ಲಾನ್ – ಬಿ.ಕೆ ಹರಿಪ್ರಸಾದ್ ಹೊಸ ವಿವಾದ

ಬೆಳಗಾವಿಯಲ್ಲಿ ಆರಂಭವಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಮುಖ ವಾರ್ಷಿಕ ಸಭೆ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಸಭೆಯ ಕುರಿತು ಕಾಂಗ್ರೆಸ್ ಹಿರಿಯ ನಾಯಕ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆತಂಕಕಾರಿ ಹೇಳಿಕೆ ನೀಡಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆಯುತ್ತಿರುವ ಈ ಸಭೆ ಮುಕ್ತಾಯಗೊಳ್ಳುತ್ತಿದ್ದಂತೆ ರಾಜ್ಯದಲ್ಲಿ ಅಹಿತಕರ ಘಟನೆಗಳು ಅಥವಾ ಅನಾಹುತಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಹೊಸ ಸಂಘರ್ಷಕ್ಕೆ ನಾಂದಿ ಹಾಡಿದೆ. […]

PRAJWAL REVANNA : ಕೆಲಸಕ್ಕೆ ಕರೀಬೇಡಿ..ಊಟಕ್ಕೆ ಮರಿಬೇಡಿ – ಜೈಲಲ್ಲಿ ಪ್ರಜ್ವಲ್ & ವಿನಯ್ ಕೆಲಸದ ಕಳ್ಳಾಟ !

ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಪ್ರಕರಣದಲ್ಲಿ ಅಪರಾಧಿಯಾಗಿ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ತಮಗೆ ವಹಿಸಲಾಗಿದ್ದ ದಿನಗೂಲಿ ಕೆಲಸದಿಂದ ಸಂಪೂರ್ಣವಾಗಿ ದೂರವುಳಿದಿದ್ದಾರೆ. ಆರಂಭದಲ್ಲಿ ಸ್ವಯಂ ಪ್ರೇರಿತರಾಗಿ ಕಾರಾಗೃಹದ ವಾಚನಾಲಯದ ಮೇಲ್ವಿಚಾರಣೆಯ ನೆರವು ನೀಡುವ ಕಾಯಕವನ್ನು ಆಯ್ದುಕೊಂಡು ದಿನಕ್ಕೆ ಐನೂರಕ್ಕೂ ಹೆಚ್ಚು ರೂಪಾಯಿ ಗಳಿಕೆಗೆ ಮುಂದಾಗಿದ್ದ ಇವರು, ಇತ್ತೀಚಿನ ದಿನಗಳಲ್ಲಿ ಅತ್ತ ಸುಳಿಯುತ್ತಿಲ್ಲ ಎಂದು ತಿಳಿದುಬಂದಿದೆ. ನ್ಯಾಯಾಲಯದಲ್ಲಿ ಬಾಕಿ ಇರುವ ಇತರ ಪ್ರಕರಣಗಳ ವಿಚಾರಣೆಗಳ […]

DK SHIVAKUMAR: 2028 ಕ್ಕೆ ಮತ್ತೆ ಅಧಿಕಾರಕ್ಕೆ ಬರ್ತೀವಿ – ಬೆಳಗಾವಿ ನೆಲದಿಂದ ಡಿಕೆಶಿ ಶಪತ

ಬೆಳಗಾವಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜನೆಗೊಂಡಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಮುಂಬರುವ 2028 ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಹಾಗೂ ತಮ್ಮ ಜಂಟಿ ನಾಯಕತ್ವದಲ್ಲಿ ಪಕ್ಷವನ್ನು ಮುನ್ನಡೆಸುವುದಾಗಿ ಹೇಳಿದ ಅವರು, ಕಾರ್ಯಕರ್ತರು ಯಾವುದೇ ಅನುಮಾನವಿಲ್ಲದೆ ಈ ಗುರಿಯೊಂದಿಗೆ ಸಾಗಬೇಕು ಎಂದು ಕರೆ ನೀಡಿದರು. ಹಿಂದೆ ಬೆಳಗಾವಿಯ ಗಾಂಧಿ ಬಾವಿಯ ಪವಿತ್ರ […]

YATNAL : ರಾಷ್ಟ್ರ & ಸನಾತನ ವಿರೋಧಿಗಳಿಗೆ ಮಾತ್ರ ಕಾಂಗ್ರೆಸ್ ನಲ್ಲಿ ಪ್ರಮೋಶನ್ ಸಿಗುತ್ತೆ : ಯತ್ನಾಳ್

ಕಾಂಗ್ರೆಸ್ ಪಕ್ಷ ಸನಾತನ ಧರ್ಮ, ದೇಶ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (RSS) ಸದಾ ಕಾಲ ನಿಂದಿಸುವ ನಾಯಕರಿಗೆ ಮಾತ್ರ ಉನ್ನತ ಹುದ್ದೆಗಳನ್ನು ನೀಡಿ ಪುರಸ್ಕರಿಸುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಟುವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಹಿಂದೂ ಸಮಾಜದ ವಿರುದ್ಧ ಮಾತನಾಡುವವರನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ದೂರಿದ ಅವರು, ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿರುವುದು ಮತ್ತು ಪ್ರಿಯಾಂಕ್ ಖರ್ಗೆ ಅವರಿಗೆ ಪ್ರಮುಖ ಸಚಿವ ಸ್ಥಾನ ಸಿಕ್ಕಿರುವುದು ಇಂತಹ […]

DK SHIVAKUMAR: ರಾಮನ ಭಕ್ತರಿಗೆ ಮಾನಸಿಕ ಅವಮಾನವಾಗಿದೆ – ಟ್ರಸ್ಟ್ ಹಗರಣದ ಬಗ್ಗೆ ಡಿಕೆಶಿ ತೀವ್ರ ಬೇಸರ

ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದಲ್ಲಿ ಭಕ್ತರ ಕಾಣಿಕೆ ಹಣ ದುರುಪಯೋಗವಾಗಿರುವ ಪ್ರಕರಣ ಇಡೀ ದೇಶದ ಆಸ್ತಿಕರ ಭಾವನೆಗಳಿಗೆ ಧಕ್ಕೆ ತಂದಿದ್ದು, ಇದು ಕೋಟ್ಯಂತರ ಭಕ್ತ ಸಮೂಹಕ್ಕೆ ಭರಿಸಲಾಗದ ಮಾನಸಿಕ ಅವಮಾನವನ್ನುಂಟು ಮಾಡಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಉನ್ನತ ಮಟ್ಟದ ಆಡಳಿತಾತ್ಮಕ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅವರು, ಇಂತಹ ಘಟನೆಗಳಿಂದ ಧಾರ್ಮಿಕ ಶ್ರದ್ಧಾಕೇಂದ್ರಗಳ ಪಾವಿತ್ರ್ಯತೆಗೆ ಧಕ್ಕೆ ಬರುತ್ತದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕದ ಎಲ್ಲಾ ಮುಜರಾಯಿ ಇಲಾಖೆಯ […]

HIGHCOURT : ಯೋಗೇಶ್ ಗೌಡ ಕೊಲೆ ಪ್ರಕರಣ – ಜೀವಾವಧಿ ಶಿಕ್ಷೆಯಿಂದ ವಿನಯ್ ಕುಲಕರ್ಣಿಗೆ ಸಿಗುತ್ತಾ ಮುಕ್ತಿ ..?

ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ರದ್ದು ಕೋರಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಮಹತ್ವದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ತನ್ನ ಅಂತಿಮ ಆದೇಶವನ್ನು ಕಾಯ್ದಿರಿಸಿದೆ. ಈ ಹಿಂದೆ ವಿಶೇಷ ಕೋರ್ಟ್ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಅಥವಾ ರದ್ದುಪಡಿಸಿ ಜಾಮೀನು ನೀಡಬೇಕು ಎಂದು ಕುಲಕರ್ಣಿ ಪರ ವಕೀಲರು ವಾದಿಸಿದ್ದಾರೆ. ಇದಕ್ಕೆ ಪ್ರತಿವಾದ ಮಂಡಿಸಿದ […]

FOOTPATH CLEARANCE: ಯಾವುದೇ ಕಾರಣಕ್ಕೂ ಆಪರೇಷನ್ ಫುಟ್‌ಪಾತ್ ನಿಲ್ಲಲ್ಲ : ಸಚಿವ ಬೈರೇಗೌಡ ಗುಡುಗು

ರಾಜಧಾನಿ ಬೆಂಗಳೂರಿನಲ್ಲಿ ನಾಗರಿಕರ ಸಂಚಾರ ಸುರಕ್ಷತೆಗಾಗಿ ಕೈಗೊಂಡಿರುವ ಪಾದಾಚಾರಿ ಮಾರ್ಗಗಳ ಒತ್ತುವರಿ ತೆರವು ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಕಡಾಖಂಡಿತವಾಗಿ ಹೇಳಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳ ಒಕ್ಕೂಟಗಳ ಪ್ರಮುಖರೊಂದಿಗೆ ಮಹತ್ವದ ಆಲೋಚನಾ ಸಭೆ ನಡೆಸಿದ ನಂತರ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಆಂದೋಲನ ಸರ್ವೋಚ್ಚ ನ್ಯಾಯಾಲಯದ ಕಟ್ಟುನಿಟ್ಟಿನ ಮಾರ್ಗಸೂಚಿಗಳ ಅನ್ವಯವೇ ಜರುಗುತ್ತಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ತೀವ್ರವಾಗಿ ಜಾರಿಯಾಗಲಿದೆ ಎಂದು ಎಚ್ಚರಿಸಿದ್ದಾರೆ. ಈ ಕಾರ್ಯಾಚರಣೆ […]

PRIYANK KHARGE: ಬಡವರ ಮಕ್ಕಳಷ್ಟೇ ದಾಳವೇ? ಕೋಮು ರಾಜಕಾರಣ ಮತ್ತು ಸಂಘ ಪರಿವಾರದ ವಿರುದ್ಧ ಖರ್ಗೆ ಕಿರಿಕ್!

ರಾಜಕೀಯ ಲಾಭದ ಉದ್ದೇಶಗಳಿಗಾಗಿ ಕೇವಲ ಹಿಂದುಳಿದ ಮತ್ತು ಬಡ ಕುಟುಂಬಗಳ ಯುವ ಸಮೂಹವನ್ನು ಆರ್‌ಎಸ್‌ಎಸ್ ಹಾಗೂ ಸಂಘ ಪರಿವಾರದ ಸಂಘಟನೆಗಳು ದಾಳವಾಗಿ ಬಳಸಿಕೊಳ್ಳುತ್ತಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಾನೂನು ಸಂಕಷ್ಟಕ್ಕೆ ಸಿಲುಕಿ ಜೈಲು ಪಾಲಾದಾಗ ಸಂಘ ಪರಿವಾರದ ನಾಯಕರು ಅವರನ್ನು ಸಂಪೂರ್ಣವಾಗಿ ಕೈಬಿಡುತ್ತಿದ್ದಾರೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ. ಧರ್ಮ ರಕ್ಷಣೆ ಹಾಗೂ ಗೋ ರಕ್ಷಣೆಯ ಮುಸುಕಿನಲ್ಲಿ ಕೇವಲ […]

R ASHOK : ಡಿಕೆ ಪುಕ್ಕಲುತನದ ಪ್ರದರ್ಶನ – ಮಂದಗತಿ ಧೋರಣೆ ವಿರುದ್ಧ ಆರ್.ಅಶೋಕ ವಾಗ್ದಾಳಿ

ರಾಜ್ಯದ ರೈತರು ಎದುರಿಸುತ್ತಿರುವ ತೀವ್ರ ಬಿಕ್ಕಟ್ಟು ಹಾಗೂ ಮುಂಗಡ ಪತ್ರದಲ್ಲಿ ಘೋಷಿಸಲಾಗಿದ್ದ ಯೋಜನೆಗಳ ಅನುಷ್ಠಾನದಲ್ಲಿ ಉಂಟಾಗಿರುವ ಹಿನ್ನಡೆಯನ್ನು ಪ್ರಸ್ತಾಪಿಸಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಕೃತಿಯ ವಿಕೋಪಕ್ಕೆ ಸಿಲುಕಿ ರಾಜ್ಯದ ವಿವಿಧ ಜಿಲ್ಲೆಗಳ ಈರುಳ್ಳಿ ಮತ್ತು ಟೊಮೇಟೊ ಬೆಳೆಗಾರರು ತೀವ್ರ ಆರ್ಥಿಕ ನಷ್ಟ ಅನುಭವಿಸುತ್ತಿದ್ದರೂ, ರೈತರ ನೆರವಿಗೆ ಧಾವಿಸಲು ಕೃಷಿ ಇಲಾಖೆಗೆ ಪೂರ್ಣಾವಧಿ ಸಚಿವರನ್ನು ನೇಮಿಸದಿರುವುದು ಪ್ರಸ್ತುತ ಸರ್ಕಾರದ ನಿಷ್ಕ್ರಿಯತೆಗೆ ಸಾಕ್ಷಿಯಾಗಿದೆ ಎಂದು ಕಿಡಿಕಾರಿದ್ದಾರೆ. […]

MAHARASHTRA: ಬೆಳಗಾವಿ ಗಡಿ ವಿವಾದಕ್ಕೆ ಮರುಜೀವ – ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ಮಹಾರಾಷ್ಟ್ರ

ಕರ್ನಾಟಕದ ಅವಿಭಾಜ್ಯ ಅಂಗವಾಗಿರುವ ಬೆಳಗಾವಿ ಗಡಿ ವಿಷಯದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೊಮ್ಮೆ ಪ್ರಚೋದನಾತ್ಮಕ ಹೆಜ್ಜೆಯಿಟ್ಟಿದೆ. ಮುಂಬೈನ ವಿಧಾನಭವನದಲ್ಲಿ ಆಯೋಜಿಸಲಾಗಿದ್ದ ಉನ್ನತ ಮಟ್ಟದ ಸಭೆಯ ಮಾತನಾಡಿದ ಮುಖ್ಯಮಂತ್ರಿ ದೇವೆಂದ್ರ ಫಡ್ನವೀಸ್, ಕಳೆದ ಎರಡು ದಶಕಗಳಿಂದ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಗಡಿ ವ್ಯಾಜ್ಯದ ತುರ್ತು ವಿಚಾರಣೆಗೆ ಆಗ್ರಹಿಸಿ ಹೊಸದಾಗಿ ನ್ಯಾಯಾಲಯದ ಮೊರೆ ಹೋಗುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಕರ್ನಾಟಕದ ಗಡಿ ಭಾಗದಲ್ಲಿ ಸಕ್ರಿಯವಾಗಿರುವ ಮರಾಠಿ ಭಾಷಿಕರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ನೆರೆ ರಾಜ್ಯ ಸರ್ಕಾರ, ಅಲ್ಲಿನ ಮರಾಠಿ ಹೋರಾಟಗಾರರ ಮೇಲಿರುವ […]