MAHARASHTRA: ಬೆಳಗಾವಿ ಗಡಿ ವಿವಾದಕ್ಕೆ ಮರುಜೀವ – ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ಮಹಾರಾಷ್ಟ್ರ

ಕರ್ನಾಟಕದ ಅವಿಭಾಜ್ಯ ಅಂಗವಾಗಿರುವ ಬೆಳಗಾವಿ ಗಡಿ ವಿಷಯದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೊಮ್ಮೆ ಪ್ರಚೋದನಾತ್ಮಕ ಹೆಜ್ಜೆಯಿಟ್ಟಿದೆ. ಮುಂಬೈನ ವಿಧಾನಭವನದಲ್ಲಿ ಆಯೋಜಿಸಲಾಗಿದ್ದ ಉನ್ನತ ಮಟ್ಟದ ಸಭೆಯ ಮಾತನಾಡಿದ ಮುಖ್ಯಮಂತ್ರಿ ದೇವೆಂದ್ರ ಫಡ್ನವೀಸ್, ಕಳೆದ ಎರಡು ದಶಕಗಳಿಂದ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಗಡಿ ವ್ಯಾಜ್ಯದ ತುರ್ತು ವಿಚಾರಣೆಗೆ ಆಗ್ರಹಿಸಿ ಹೊಸದಾಗಿ ನ್ಯಾಯಾಲಯದ ಮೊರೆ ಹೋಗುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ ಕರ್ನಾಟಕದ ಗಡಿ ಭಾಗದಲ್ಲಿ ಸಕ್ರಿಯವಾಗಿರುವ ಮರಾಠಿ ಭಾಷಿಕರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ನೆರೆ ರಾಜ್ಯ ಸರ್ಕಾರ, ಅಲ್ಲಿನ ಮರಾಠಿ ಹೋರಾಟಗಾರರ ಮೇಲಿರುವ […]

BY VIJAYENDRA : ನಾನು ಮುಂದಿನ ‘ಸಿಎಂ’ ಎಂಬುದೇ ಕೆಲವರಿಗೆ ತೊಂದರೆ – ವಿಜಯೇಂದ್ರ ಸೈಲೆಂಟ್ ಕೌಂಟರ್ !

ಚಿತ್ರದುರ್ಗದಲ್ಲಿ ನಡೆದ ಆಗ್ನೇಯ ಪದವೀಧರ ಕ್ಷೇತ್ರದ ಪೂರ್ವಸಿದ್ಧತಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ತಮ್ಮನ್ನು ಮುಂದಿನ ಸಿಎಂ ಎಂದು ಬಿಂಬಿಸುತ್ತಿರುವ ಪಕ್ಷದ ನಾಯಕರ ನಡೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕ ಎಂ. ಚಂದ್ರಪ್ಪ ಅವರು ವಿಜಯೇಂದ್ರರನ್ನು ಭಾವಿ ಮುಖ್ಯಮಂತ್ರಿ ಎಂದು ಕರೆಯುತ್ತಿದ್ದಂತೆ ಪ್ರತಿಕ್ರಿಯಿಸಿದ ಅವರು, ಇಂತಹ ಅತಿರೇಕದ ಹೊಗಳಿಕೆಗಳೇ ಪ್ರಸ್ತುತ ತಮಗೆ ಎದುರಾಗಿರುವ ಅತಿ ದೊಡ್ಡ ಕಂಟಕ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂಬುದನ್ನು ಒತ್ತಿಹೇಳಿದ ಅವರು, ಮೊದಲು […]

SATISH JARAKIHOLI : ಸಿದ್ದು & ಸಾಹುಕಾರ್ ನಡುವೆ ಮುನಿಸು..? – ಮೌನ ಮುರಿದ ಸತೀಶ್ ಜಾರಕಿಹೊಳಿ !

ಕರ್ನಾಟಕ ಕಾಂಗ್ರೆಸ್ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ನಡುವಿನ ರಾಜಕೀಯ ಬಾಂಧವ್ಯ ಇತ್ತೀಚೆಗೆ ತೀವ್ರ ಚರ್ಚೆಗೆ ಕಾರಣವಾಗಿತ್ತು. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಗದ್ದುಗೆ ಏರಿದ ದಿನದಿಂದಲೂ ಸಿದ್ದರಾಮಯ್ಯ ಮತ್ತು ಜಾರಕಿಹೊಳಿ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ವದಂತಿಗಳು ಹರಡಿದ್ದವು. ಅದರಲ್ಲೂ ಇತ್ತೀಚಿನ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ನಾಯಕರು ಅಂತರ ಕಾಯ್ದುಕೊಂಡು ಕುಳಿತಿದ್ದ ವಿಡಿಯೋ ಸೋಶಿಯಲ್ಮೀಡಿಯಾದಲ್ಲಿ ವೈರಲ್ ಆಗಿ, ಸಿದ್ದರಾಮಯ್ಯ ವಿರುದ್ಧ ಜಾರಕಿಹೊಳಿ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆದಿತ್ತು […]

BIDADI TOWNSHIP: ಬಿಡದಿ ಟೌನ್ ಶಿಪ್ ಗೆ ಅನ್ನದಾತರ ತೀವ್ರ ಪ್ರತಿರೋಧ – ಮಹಾಸಂಗ್ರಾಮಕ್ಕೆ ಸಿದ್ಧವಾದ 15 ಜಿಲ್ಲೆಗಳ ರೈತರು

ಬಿಡದಿಯಲ್ಲಿ ಜಿಬಿಡಿಎ ವತಿಯಿಂದ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಸ್ಮಾರ್ಟ್ ಟೌನ್‌ಶಿಪ್ ಯೋಜನೆಯ ವಿರುದ್ಧ ಸ್ಥಳೀಯ ರೈತರ ವಲಯದಲ್ಲಿ ಭಾರಿ ಅಸಮಾಧಾನ ಸ್ಫೋಟಗೊಂಡಿದೆ. ಕೃಷಿ ಭೂಮಿಯನ್ನು ಕಳೆದುಕೊಂಡರೆ ಸಣ್ಣ ರೈತರು ಆರ್ಥಿಕವಾಗಿ ಬೀದಿಗೆ ಬೀಳಲಿದ್ದಾರೆ ಮತ್ತು ಈ ಭಾಗದ ಜೀವನಾಡಿಯಾಗಿರುವ ಹೈನುಗಾರಿಕೆ ಸಂಪೂರ್ಣ ನಶಿಸಿಹೋಗಲಿದೆ ಎಂದು ರೈತ ಮುಖಂಡ ಪ್ರಕಾಶ್ ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕರೊಂದಿಗೆ ಸುದೀರ್ಘ ಚರ್ಚೆ ನಡೆಸಲಾಗಿದ್ದು, ಭೂಮಿ ಬಿಟ್ಟುಕೊಡುವುದಿಲ್ಲ ಎಂಬ ನಿರ್ಧಾರವನ್ನು ಜನಪ್ರತಿನಿಧಿಗಳ ಮುಂದೆ ಪ್ರಸ್ತಾಪಿಸಲಾಗಿದೆ. ಇದಕ್ಕೆ ಸ್ಪಂದಿಸಿರುವ ಶಾಸಕರು, ಶೀಘ್ರದಲ್ಲೇ ಮುಖ್ಯಮಂತ್ರಿಗಳೊಂದಿಗೆ […]

RAM MANDIR : ವಕ್ಫ್ ಬೋರ್ಡ್ ಹಗರಣದ ಬಗ್ಗೆ ಏಕೆ ತುಟಿ ಬಿಚ್ಚಲ್ಲ..? ಕಾಂಗ್ರೆಸ್ ಗೆ ಜಾಡಿಸಿದ ಯೋಗಿ

ಉತ್ತರ ಪ್ರದೇಶದ ಪ್ರತಾಪಗಢದಲ್ಲಿ ಆಯೋಜಿಸಲಾಗಿದ್ದ ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಸಮಾಜವಾದಿ ಪಾರ್ಟಿಯ ಇಬ್ಬಂದಿ ನೀತಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ದೇಶದ ಸನಾತನ ಸಂಸ್ಕೃತಿಯನ್ನು ನಿರಂತರವಾಗಿ ಟೀಕಿಸುವ ಈ ಪಕ್ಷಗಳು, ವಕ್ಫ್ ಆಸ್ತಿಗಳ ದುರ್ಬಳಕೆ ಹಾಗೂ ಅಲ್ಲಿ ನಡೆದಿರುವ ಬೃಹತ್ ಹಗರಣಗಳ ಬಗ್ಗೆ ಕಣ್ಣುಮುಚ್ಚಿ ಕುಳಿತಿರುವುದೇಕೆ ಎಂದು ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಹಣಕಾಸು ವ್ಯವಹಾರಗಳ ಕುರಿತು ವಿಪಕ್ಷಗಳು ಅಪಸ್ವರ […]

IRAN : ಮಧ್ಯಪ್ರಾಚ್ಯ ಮತ್ತೆ ಧಗಧಗ – ಇರಾನ್‌ನ 80 ಮಿಲಿಟರಿ ತಾಣಗಳು ಧೂಳೀಪಟ

ಅಂತರರಾಷ್ಟ್ರೀಯ ತೈಲ ಸಾಗಣೆಯ ಪ್ರಮುಖ ಮಾರ್ಗ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಇತ್ತೀಚೆಗೆ ಸೌದಿ ಅರೇಬಿಯಾ ಮತ್ತು ಕತಾರ್ ಸೇರಿದಂತೆ ವಿವಿಧ ದೇಶಗಳ ವಾಣಿಜ್ಯ ಹಡಗುಗಳ ಮೇಲೆ ನಡೆಸಿದ್ದ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳಿಗೆ ಅಮೆರಿಕ ಅತ್ಯಂತ ಕಠಿಣವಾಗಿ ಪ್ರತಿಕ್ರಿಯಿಸಿದೆ. ಉಭಯ ದೇಶಗಳ ನಡುವೆ ಇದ್ದ ತಾತ್ಕಾಲಿಕ ಕದನ ವಿರಾಮವನ್ನು ಇರಾನ್ ಉಲ್ಲಂಘಿಸಿದೆ ಎಂದು ಆಕ್ರೋಶಗೊಂಡಿರುವ ಶ್ವೇತಭವನ, ಇರಾನ್ ಮೇಲಿನ ತೈಲ ವಿನಾಯಿತಿಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಭೀಕರ ಮಿಲಿಟರಿ ಕಾರ್ಯಾಚರಣೆ ಆರಂಭಿಸಿದೆ. ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ […]

SIR : ಬೆಳಗಾವಿಯಲ್ಲಿ ಬಿಎಲ್ಒ ಗಳ ಸೋಮಾರಿತನ – ಎಸ್.ಐ.ಆರ್ ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮರಡಿಮಠ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳನ್ನು ಚುನಾವಣಾ ಕೆಲಸಕ್ಕೆ ಬಳಸಿಕೊಂಡಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಅತ್ಯಂತ ಜವಾಬ್ದಾರಿಯುತ ಫಾರಂಗಳನ್ನು ಬೂತ್ ಮಟ್ಟದ ಅಧಿಕಾರಿಗಳು ಸ್ವತಃ ಭರ್ತಿ ಮಾಡುವ ಬದಲಾಗಿ, ಶಾಲೆಯ ಪುಟ್ಟ ಮಕ್ಕಳಿಂದ ಬರೆಸುತ್ತಿದ್ದಾರೆ ಎಂಬ ದೂರು ಕೇಳಿಬಂದಿದೆ. ವಿದ್ಯಾರ್ಥಿಗಳು ತರಗತಿಯಲ್ಲಿ ಕುಳಿತು ಈ ಅರ್ಜಿಗಳನ್ನು ತುಂಬುತ್ತಿರುವ ದೃಶ್ಯಾವಳಿಗಳ ವಿಡಿಯೋ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಾರ್ವಜನಿಕರು ಮತ್ತು ಪೋಷಕರು ಶಿಕ್ಷಣ […]

GRUHA LAXMI : ಗೃಹಲಕ್ಷ್ಮಿ ಯೋಜನೆಗೆ ಬೇಷ್ ಎಂದ ಕೇಂದ್ರ – ಪಿಎಂ ಆರ್ಥಿಕ ಸಲಹಾ ಸಮಿತಿಯಿಂದ ಗ್ಯಾರೆಂಟಿಗಳ ಶ್ಲಾಘನೆ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಕಾರ್ಯಕ್ರಮದ ಫಲಾನುಭವಿಗಳಿಗೆ ಮುಂಬರುವ ದಿನಗಳಲ್ಲಿ ಆರ್ಥಿಕ ನೆರವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳು ಗೋಚರಿಸುತ್ತಿವೆ. ಹೌದು, ದೇಶದ ವಿವಿಧ ಭಾಗಗಳಲ್ಲಿ ಜಾರಿಯಲ್ಲಿರುವ ಹದಿನೈದಕ್ಕೂ ಹೆಚ್ಚು ಈ ರೀತಿಯ ಜನಕಲ್ಯಾಣ ಯೋಜನೆಗಳ ಬಗ್ಗೆ ವಿಶೇಷ ವರದಿ ಸಿದ್ಧಪಡಿಸಿರುವ ಪ್ರಧಾನಮಂತ್ರಿ ಆರ್ಥಿಕ ಸಲಹಾ ಸಮಿತಿ, ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದೆ. ಹಣದುಬ್ಬರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು, ಮಹಿಳೆಯರಿಗೆ ಪ್ರಸ್ತುತ ನೀಡಲಾಗುತ್ತಿರುವ ಎರಡು ಸಾವಿರ ರೂಪಾಯಿಗಳ ಮಾಸಿಕ […]

RAM MANDIR : ಅಯೋಧ್ಯೆ ಟ್ರಸ್ಟ್ ಅಕ್ರಮ ಆರೋಪ: ಸಿಬಿಐ ತನಿಖೆಗೆ ಕಾಂಗ್ರೆಸ್ ಬಿಗಿಪಟ್ಟು

ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಹತ್ವದ ಸಾಮಾನ್ಯ ಸಭೆಯಲ್ಲಿ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಹಣಕಾಸು ವ್ಯವಹಾರದಅಕ್ರಮಗಳ ವಿರುದ್ಧ ಸಿಬಿಐ ತಂಡದಿಂದ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಒತ್ತಾಯಿಸಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಹಿರಿಯ ನಾಯಕರಾದ ಸಿದ್ದರಾಮಯ್ಯ ಹಾಗೂ ಎಂ. ವೀರಪ್ಪ ಮೊಯ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಾಮಮಂದಿರ ವಿವಾದ ಮಾತ್ರವಲ್ಲದೆ, […]

MEKEDATU : ನಿಮ್ಮ ಪಾದಯಾತ್ರೆಯೇ ಫೇಕ್ – ಮೇಕೆದಾಟು ಸಂಬಂಧ ಡಿಕೆ ಮೌನಕ್ಕೆ ವಾಟಾಳ್ ಆಕ್ರೋಶ

ಕಾವೇರಿ ನದಿ ನೀರು ಹಂಚಿಕೆ ಮತ್ತು ಮೇಕೆದಾಟು ಅಣೆಕಟ್ಟು ನಿರ್ಮಾಣದ ವಿಷಯದಲ್ಲಿ ತಮಿಳುನಾಡು ಸರ್ಕಾರದ ನಿರಂತರ ವಿರೋಧವನ್ನು ಖಂಡಿಸಿ ಜುಲೈ 15ರಂದು ಅತ್ತಿಬೆಲೆ ಗಡಿ ಭಾಗದಲ್ಲಿ ಸಂಪೂರ್ಣ ಬಂದ್ ಮಾಡಲು ಕನ್ನಡ ಪರ ಸಂಘಟನೆಗಳು ನಿರ್ಧರಿಸಿವೆ. ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವ ಈ ಯೋಜನೆಗೆ ತಮಿಳುನಾಡು ಅಡ್ಡಗಾಲು ಹಾಕುತ್ತಿರುವುದನ್ನು ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಆನೇಕಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ […]