SIDDARAMAIAH: ಆರ್.ಎಸ್.ಎಸ್ & ಭಜರಂಗದಳದ ಬಗ್ಗೆ ಅವಹೇಳನ – ಸಿದ್ದು ವಿರುದ್ಧದ ಖಾಸಗಿ ದೂರು ವಜಾ,

ವಿಧಾನಸಭೆಯಲ್ಲಿ ಆರ್ ಎಸ್ ಎಸ್ ಮತ್ತು ಬಜರಂಗದಳ ಸಂಘಟನೆಗಳ ವಿರುದ್ಧ ಅತಿಹೆಚ್ಚು ಅಪರಾಧ ಪ್ರಕರಣಗಳು ನಡೆಯುತ್ತಿವೆ ಎಂದು ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ವಿರುದ್ಧ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಆರ್ ಎಸ್ ಎಸ್ ಕುರಿತು ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಲ್ಲಿಸಲಾಗಿದ್ದ ಖಾಸಗಿ ದೂರನ್ನು ಈ ಹಿಂದೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ವಜಾಗೊಳಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕೆಳ […]

HD REVANNA : ಗ್ರಾಮ ಪಂಚಾಯಿತಿ ಮೀಸಲಾತಿ ವಿವಾದ – ಹಾಸನ ಜಿಲ್ಲಾಧಿಕಾರಿ ವಿರುದ್ಧ ರೇವಣ್ಣ ಗುಡುಗು

ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ಕಾರ್ಯವೈಖರಿ ವಿರುದ್ಧ ಮಾಜಿ ಸಚಿವ ಹೆಚ್.ಡಿ. ರೇವಣ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದಬ್ಬಾಳಿಕೆ ನಡೆಸಿದರೆ ಸರಿಪಡಿಸುವುದು ಹೇಗೆ ಎಂಬುದು ತಮಗೆ ಚೆನ್ನಾಗಿ ತಿಳಿದಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಗ್ರಾಮ ಪಂಚಾಯಿತಿ ಮೀಸಲಾತಿ ನಿಗದಿ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿ ತಹಸೀಲ್ದಾರ್ ಅವರಿಗೆ ಪತ್ರ ಬರೆದಿರುವುದರ ಹಿಂದಿನ ಉದ್ದೇಶವೇನು, ವರದಿ ಪಡೆದುಕೊಂಡ ನಂತರ ಮೀಸಲಾತಿ ಪಟ್ಟಿಯನ್ನು ಬದಲಿಸಲು ಕಾರಣವೇನು ಮತ್ತು ಬದಲಾವಣೆ ಮಾಡುವಾಗ ಸೂಕ್ತ ಸಮರ್ಥನೆ ನೀಡಬೇಕಲ್ಲವೇ ಎಂದು […]

CABINET : ನಾಗೇಂದ್ರ ರಾಜೀನಾಮೆ ಬಳಿಕ ಸಚಿವ ಸ್ಥಾನದ ಪೈಪೋಟಿ ಬಿರುಸು – ಡಿಕೆಗೆ ಡಬಲ್ ಟೆನ್ಶನ್

ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಹೆಚ್ಚಾಗಿದೆ. ರಾಜ್ಯ ಸಚಿವ ಸಂಪುಟದಲ್ಲಿ ಈಗ ಎರಡು ಸ್ಥಾನಗಳು ಖಾಲಿ ಇರುವುದರಿಂದ ಯಾರಿಗೆ ಅವಕಾಶ ನೀಡಬೇಕು ಎಂಬ ವಿಚಾರ ಪಕ್ಷದ ನಾಯಕರಿಗೆ ದೊಡ್ಡ ಸವಾಲಾಗಿದೆ. ಈ ಹಿಂದೆ ಎರಡನೇ ಹಂತದ ವಿಸ್ತರಣೆಯಲ್ಲಿ ಅಸಮಾಧಾನಗೊಂಡಿದ್ದ ಹಿರಿಯ ಶಾಸಕರಿಗೆ ಭರವಸೆ ನೀಡಲಾಗಿತ್ತು. ಇದೀಗ ನಾಗೇಂದ್ರ ಅವರ ನಿರ್ಗಮನದಿಂದ ತೆರವಾದ ಸ್ಥಾನವನ್ನು ವಾಲ್ಮೀಕಿ ಸಮುದಾಯಕ್ಕೆ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಜೊತೆಗೆ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಇಲ್ಲದಿರುವುದು ಮತ್ತೊಂದು […]

RAVICHANDRAN : ವಿಧಾನ ಪರಿಷತ್ ನಾಮನಿರ್ದೇಶನಕ್ಕೆ ರವಿಚಂದ್ರನ್ ಹೆಸರು ಚರ್ಚೆ – ಎಂ.ಎಲ್.ಸಿ ಆಗ್ತಾರಾ ಕ್ರೇಜಿಸ್ಟಾರ್..?

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ರವಿಚಂದ್ರನ್ ಅವರು ವಿಧಾನ ಪರಿಷತ್ ಪ್ರವೇಶಿಸುವ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ. ಕಲಾ ಕ್ಷೇತ್ರಕ್ಕೆ ನೀಡುವ ಮೀಸಲು ಕೋಟಾದಡಿ ಅವರ ಹೆಸರನ್ನು ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಪಕ್ಷದೊಳಗೆ ಪ್ರಸ್ತಾಪ ಮುನ್ನೆಲೆಗೆ ಬಂದಿದ್ದು, ಪಕ್ಷದ ಹಂತದಲ್ಲಿ ಈ ಪ್ರಸ್ತಾಪಕ್ಕೆ ಒಪ್ಪಿಗೆ ಸಿಕ್ಕಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಸದ್ಯ ಸರ್ಕಾರದ ಅಧಿಕೃತ ಆದೇಶ ಮತ್ತು ರಾಜ್ಯಪಾಲರ ಅಂಕಿತದ ಬಳಿಕವಷ್ಟೇ ಈ ವಿಚಾರಕ್ಕೆ ಅಂತಿಮ ರೂಪ ಸಿಗಲಿದೆ. ಈ […]

JANARDANA REDDY : ಸುಮ್ನೆ ಪುರಾಣದ ಡೈಲಾಗ್ ಹೊಡಿಬೇಡ- ನಾಗೇಂದ್ರ ಸವಾಲಿಗೆ ರೆಡ್ಡಿ ಕೌಂಟರ್ !

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನೂರಾರು ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಅತ್ಯಂತ ಗಂಭೀರ ಆರೋಪ ಮಾಡಿದ್ದಾರೆ. ನಿಗಮದ ಲೆಕ್ಕಾಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅವರನ್ನು ಕಾಂಗ್ರೆಸ್ ನಾಯಕರೇ ಹತ್ಯೆ ಮಾಡಿದ್ದಾರೆ ಎಂದು ಅವರು ನೇರವಾಗಿ ಆರೋಪಿಸಿದ್ದಾರೆ. ಪುರಾಣ ಕಥೆಗಳನ್ನು ಹೇಳಬೇಡಿ, ಇದು ನಿನ್ನ ಕರ್ಮದ ಫಲ ಎಂದು ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ತಿರುಗೇಟು ನೀಡಿದ್ದಾರೆ. […]

PM MODI : ಮೋದಿ – ಪುಟಿನ್ ದ್ವಿಪಕ್ಷೀಯ ಸಭೆ : ಭಾರತ & ರಷ್ಯಾ ನಡುವೆ ತಂತ್ರಜ್ಞಾನ ಪಾಲುದಾರಿಕೆ ಒಪ್ಪಂದ

ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಗಸ್ಟ್ 31 ರಂದು ಕಿರ್ಗಿಸ್ತಾನ್ ನ ಬಿಷ್ಕೆಕ್ ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯ ಸಂದರ್ಭದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಭೇಟಿಯ ನಂತರ ಸೆಪ್ಟೆಂಬರ್ 12 ಮತ್ತು 13 ರಂದು ನವದೆಹಲಿಯಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲೂ ಉಭಯ ನಾಯಕರು ಚರ್ಚೆಯನ್ನು ಮುಂದುವರಿಸಲಿದ್ದಾರೆ ಎಂದು ರಷ್ಯಾದ ಟಾಸ್ ಸುದ್ದಿಸಂಸ್ಥೆ ವರದಿ ಮಾಡಿದೆ. ರಷ್ಯಾದ ಅಧ್ಯಕ್ಷೀಯ ಸಹಾಯಕ ಯೂರಿ ಉಷಾಕೋವ್ ಮಾಹಿತಿ ಪ್ರಕಾರ ಪುಟಿನ್ ಅವರು […]

KPSC SCAM : ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ನಾಲ್ಕು ಪರೀಕ್ಷೆಗಳ ಓಎಂಆರ್ ಅಕ್ರಮಕ್ಕೆ ಸಿಐಡಿ, ಇಡಿ ಬಲೆ

ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿನ ಅಕ್ರಮ ಬೆಳಕಿಗೆ ಬಂದ ಬೆನ್ನಲ್ಲೇ ಕರ್ನಾಟಕ ಲೋಕಸೇವಾ ಆಯೋಗದ ಹಗರಣದ ತನಿಖೆ ವಿಸ್ತರಣೆಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಆಯೋಗ ನಡೆಸಿದ್ದ ನಾಲ್ಕು ಪ್ರಮುಖ ನೇಮಕಾತಿ ಪರೀಕ್ಷೆಗಳ ಬಗ್ಗೆ ಸಿಐಡಿ ಮತ್ತು ಜಾರಿ ನಿರ್ದೇಶನಾಲಯ ಜಂಟಿ ತನಿಖೆ ಆರಂಭಿಸಿವೆ. ಓಎಂಆರ್ ತಿದ್ದುಪಡಿ ಮತ್ತು ಪ್ರಶ್ನೆಪತ್ರಿಕೆ ವಿತರಣೆಯಲ್ಲಿನ ಲೋಪದ ಆರೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ತನಿಖೆಗೆ ಒಳಪಟ್ಟಿರುವ ನಾಲ್ಕು ಪರೀಕ್ಷೆಗಳು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಪಂಚಾಯತ್ ಅಭಿವೃದ್ಧಿ ಇಲಾಖೆ, ಕೈಗಾರಿಕೆ ಮತ್ತು […]

CT RAVI : ಭ್ರಷ್ಟರನ್ನು ರಕ್ಷಿಸಲು ಬಿಡಲ್ಲ – ಬಿ.ನಾಗೇಂದ್ರ & ಸರ್ಕಾರದ ವಿರುದ್ಧ ಸಿಟಿ ರವಿ ಚಾಟಿ

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಹಗರಣದಲ್ಲಿ ಭಾಗಿಯಾದವರು ಯಾರೇ ಆಗಲಿ ಕಠಿಣ ಶಿಕ್ಷೆಗೆ ಗುರಿಯಾಗಲೇಬೇಕು ಮತ್ತು ಪ್ರಕರಣದ ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಬಿ.ನಾಗೇಂದ್ರ ಅವರ ರಾಜೀನಾಮೆ ವಿಷಯದ ಬಗ್ಗೆ ಮಾತನಾಡಿದ ಅವರು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎನ್ನುವುದು ಸಹಜ ನ್ಯಾಯ. ಇ.ಡಿ ತನಿಖೆಯ […]

B NAGENDRA : ಕಣ್ಣೀರು ಹಾಕುತ್ತಾ ರೆಡ್ಡಿ – ರಾಮುಲು ವಿರುದ್ಧ ತೊಡೆ ತಟ್ಟಿದ ಬಿ.ನಾಗೇಂದ್ರ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅವ್ಯವಹಾರದ ಆರೋಪದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಈ ನಿರ್ಧಾರ ಪ್ರಕಟಿಸಿದ ಅವರು, ತಮ್ಮ ರಾಜೀನಾಮೆಯು ಯಾವುದೇ ಒತ್ತಡದಿಂದಲ್ಲ, ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಉದ್ದೇಶದಿಂದ ಸ್ವಇಚ್ಛೆಯಿಂದ ತೆಗೆದುಕೊಂಡ ನಿರ್ಧಾರ ಎಂದು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯ ವೇಳೆ ಭಾವುಕರಾದ ನಾಗೇಂದ್ರ ಕಣ್ಣೀರು ಹಾಕಿದರು. ಸಚಿವ ಸ್ಥಾನ ಮಾತ್ರವಲ್ಲ, ಅಗತ್ಯಬಿದ್ದರೆ […]

NICE : ನೈಸ್ ಅಕ್ರಮದ ವಿರುದ್ಧ ಜೆಡಿಎಸ್ ಅಭಿಯಾನ – “ನಥಿಂಗ್ ನೈಸ್” ಲಾಂಚ್ ಮಾಡಿದ ನಿಖಿಲ್

ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಯಲ್ಲಿ ನೈಸ್ ಕಂಪನಿ ನಡೆಸಿದೆ ಎನ್ನಲಾದ ವ್ಯಾಪಕ ಅಕ್ರಮಗಳ ವಿರುದ್ಧ ಜೆಡಿಎಸ್ ಯುವ ಘಟಕ ಬೃಹತ್ ಹೋರಾಟ ಆರಂಭಿಸಿದೆ. ಈ ಹೋರಾಟದ ಭಾಗವಾಗಿ ನಥಿಂಗ್ ನೈಸ್ ಹೆಸರಿನ ಜನಾಂದೋಲನಕ್ಕೆ ಚಾಲನೆ ನೀಡಲಾಗಿದ್ದು, ಯೋಜನೆಗೆ ಸಂಬಂಧಿಸಿದ ಎಲ್ಲಾ ದಾಖಲೆ, ಸತ್ಯಾಂಶಗಳನ್ನು ಜನರಿಗೆ ತಲುಪಿಸಲು ವಿಶೇಷ ವೆಬ್ ತಾಣವನ್ನು ಸಿದ್ಧಪಡಿಸಲಾಗಿದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಈ ಜಾಲತಾಣದ ಪೋಸ್ಟರ್ ಮತ್ತು ಕ್ಯೂಆರ್ ಕೋಡ್ ಬಿಡುಗಡೆ ಮಾಡಿದರು. […]