ಸ್ಯಾಂಡಲ್‌ವುಡ್‌ನ ಪ್ರಸಿದ್ಧ ನಿರ್ದೇಶಕ ಜೋಗಿ ಪ್ರೇಮ್ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Sudeep-Jogi Prem) ಅವರೊಂದಿಗಿನ ತಮ್ಮ ನೂತನ ಸಿನಿಮಾದ ಬಗ್ಗೆ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಸುದೀಪ್ ಹಾಗೂ ತಮ್ಮ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರದ ಟೈಟಲ್ ಟೀಸರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಪ್ರೇಮ್ ತಿಳಿಸಿದ್ದಾರೆ. ದೀಪಾವಳಿ ಹಬ್ಬದ ಶುಭಾಶಯ ಕೋರುವ ವಿಶೇಷ ವಿಡಿಯೋ ಮೂಲಕ ಈ ಕುತೂಹಲಕಾರಿ ವಿಷಯವನ್ನು ಅವರು ಬಹಿರಂಗಪಡಿಸಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಭಾರಿ ಕ್ರೇಜ್ ಸೃಷ್ಟಿಸಿರುವ ಈ ಕಾಂಬಿನೇಷನ್ ಮತ್ತೆ ಒಂದಾಗುತ್ತಿರುವುದು ಗಾಂಧಿನಗರದಲ್ಲಿ ಹೊಸ ಸಂಚಲನ ಮೂಡಿಸಿದೆ. ಪ್ರೇಮ್ ನೀಡಿದ ಈ ದೀಪಾವಳಿ ಗಿಫ್ಟ್‌ನಿಂದ ಸುದೀಪ್ ಅಭಿಮಾನಿಗಳು ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.
ಅತೀ ಶೀಘ್ರದಲ್ಲೇ ರಿಲೀಸ್ ಆಗಲಿದೆ ಟೈಟಲ್ ಟೀಸರ್
ಜೋಗಿ ಪ್ರೇಮ್ ಹಾಗೂ ಕಿಚ್ಚ ಸುದೀಪ್ ಒಟ್ಟಿಗೆ ಹೊಸ ಸಿನಿಮಾ ಮಾಡುತ್ತಿರುವುದು ಈಗಾಗಲೇ ಖಚಿತವಾಗಿದೆ. ಈ ಸಿನಿಮಾದ ಟೈಟಲ್ ಟೀಸರ್ ಶೂಟಿಂಗ್ ಕೂಡ ಸಂಪೂರ್ಣವಾಗಿ ಮುಕ್ತಾಯಗೊಂಡಿದೆ.
ಮೊದಲು ಅಕ್ಟೋಬರ್ 20ರಂದು ಈ ಟೀಸರ್ ಬಿಡುಗಡೆಯಾಗಲಿದೆ ಎನ್ನಲಾಗಿತ್ತು. ಆದರೆ ದಸರಾ ಹಬ್ಬದ ನಂತರವೇ ಟೀಸರ್ ರಿಲೀಸ್ ಮಾಡುವುದಾಗಿ ನಿರ್ದೇಶಕ ಪ್ರೇಮ್ ತಿಳಿಸಿದ್ದರು.
ಇದೀಗ ದೀಪಾವಳಿಯ ಶುಭ ದಿನದಂದು ವಿಡಿಯೋ ಹಂಚಿಕೊಂಡಿರುವ ಪ್ರೇಮ್, ಅತ್ಯಂತ ಶೀಘ್ರದಲ್ಲೇ ದಿನಾಂಕ ಮತ್ತು ಸಮಯವನ್ನು ಪ್ರಕಟಿಸಿ ಟೈಟಲ್ ಟೀಸರ್ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಈ ಚಿತ್ರದಲ್ಲಿ ಸುದೀಪ್ ಲುಕ್ ಹೇಗಿರಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
Sudeep-Jogi Prem: ದಿ ವಿಲನ್, ಕೆಡಿ ಬಳಿಕ 3ನೇ ಬಾರಿಗೆ ಸುದೀಪ್-ಪ್ರೇಮ್ ಕಾಂಬೋ
ಜೋಗಿ ಪ್ರೇಮ್ ಮತ್ತು ಸುದೀಪ್ ಕಾಂಬಿನೇಷನ್‌ನಲ್ಲಿ ಈ ಹಿಂದೆ ‘ದಿ ವಿಲನ್’ ಸಿನಿಮಾ ಮೂಡಿಬಂದಿತ್ತು. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಹಾಗೂ ಕಿಚ್ಚ ಸುದೀಪ್ ನಟಿಸಿದ್ದ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಧಮಾಕಾ ಮಾಡಿತ್ತು.
ಆ ನಂತರ ಧ್ರುವ ಸರ್ಜಾ ಅಭಿನಯದ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದಲ್ಲೂ ಸುದೀಪ್ ಅವರು ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.
ಇದೀಗ ಈ ಜೋಡಿ ಮೂರನೇ ಬಾರಿಗೆ ಪೂರ್ಣ ಪ್ರಮಾಣದ ಹೊಸ ಸಿನಿಮಾಗಾಗಿ ಕೈಜೋಡಿಸಿದೆ. ಪ್ರೇಮ್-ಸುದೀಪ್ ಜೋಡಿಯ ಈ ನೂತನ ಚಿತ್ರಕ್ಕೆ ಯಾವ ಶೀರ್ಷಿಕೆ ಇಡಲಿದ್ದಾರೆ ಹಾಗೂ ಕಥೆ ಹೇಗಿರಲಿದೆ ಎಂಬುದನ್ನು ತಿಳಿಯಲು ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.




