☔ Weather
Bengaluru: ☀️ 24°C | AQI 113
Mysore: ☀️ 22°C | AQI 110
Mangalore: ☀️ 27°C | AQI 172
Bengaluru: ☀️ 24°C | AQI 113
☔ Weather
Bengaluru: ☀️ 24°C | AQI 113
Mysore: ☀️ 22°C | AQI 110
Mangalore: ☀️ 27°C | AQI 172
Bengaluru: ☀️ 24°C | AQI 113

panchayat elections: ಜನವರಿಯಲ್ಲಿ ನಡೆಯಲಿದೆ ಪಂಚಾಯತ್ ಚುನಾವಣೆ, ಸಿದ್ಧತೆ ಆರಂಭಿಸಿದ ಆಯೋಗ

panchayat elections
ಜಿಲ್ಲಾ ಪಂಚಾಯತ್‌, ತಾಲ್ಲೂಕು ಪಂಚಾಯಿತಿ ಚುನಾವಣೆಗಳು ನಡೆದ 10 ವರ್ಷಗಳಾಗಿವೆ. ಈಗ ಜನವರಿಯಲ್ಲಿ ಚುನಾವಣೆ ನಡೆಸಲು ಸಿದ್ಧತೆ ಆರಂಭ ಆಗಿದೆ.

ಪಂಚಾಯತ್ ಚುನಾವಣೆಗಳನ್ನು (panchayat elections) ನಿಜವಾದ ಪ್ರಜಾಪ್ರಭುತ್ವದ ಉತ್ಸವ ಎಂದೇ ಕರೆಯಲಾಗುತ್ತದೆ. ಆದರೆ ಪಂಚಾಯತ್ ಚುನಾವಣೆ ನಡೆದು ವರ್ಷಗಳೇ ಕಳೆದಿವೆ. ರಾಜ್ಯದಲ್ಲಿರುವ ಹಲವಾರು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳು ಆಡಳಿತಾಧಿಕಾರಿಗಳ ನಿಯಂತ್ರಣದಲ್ಲಿವೆ. ಪ್ರಜಾ ಪ್ರತಿನಿಧಿಗಳೇ ಇಲ್ಲದಾಗಿದೆ. ಆದರೆ ಇದೀಗ ಹಲವು ವರ್ಷಗಳ ಬಳಿಕ ಪಂಚಾಯತ್​​ಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಜ್ಜಾಗಿದೆ. ಮುಂದಿನ ಜನವರಿ ತಿಂಗಳಲ್ಲಿ ಪಂಚಾಯತ್ ಚುನಾವಣೆ ನಡೆಯುವುದು ಖಾತ್ರಿ ಎನ್ನಲಾಗುತ್ತಿದೆ.

ಪಂಚಾಯತ್ ಚುನಾವಣೆಗಳಿಗಾಗಿ ಚುನಾವಣಾ ಆಯೋಗವು ಸಿದ್ಧತೆ ಆರಂಭಿಸಿದ್ದು, ಎಲ್ಲ ಜಿಲ್ಲಾಧಿಕಾರಿಗಳು ಸೂಚನೆ ನೀಡಿ, ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡುವಂತೆ ನಿರ್ದೇಶನ ನೀಡಿದೆ. ಜಿಲ್ಲಾಧಿಕಾರಿಗಳು ಪ್ರಾಥಮಿಕ ಸಭೆಗಳನ್ನು ನಡೆಸಿ ನೇಮಕಗೊಳಿಸಲಾಗಿರುವ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿ ಇತರೆ ಪ್ರಮುಖ ಚುನಾವಣಾ ಸಂಬಂಧಿತ ಅಧಿಕಾರಿಗಳು ಸೂಕ್ತ ತರಬೇತಿಯನ್ನು ನೀಡಬೇಕಾಗಿರುತ್ತದೆ. ನವೆಂಬರ್ 16ರ ಒಳಗಾಗಿ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳ ನೇಮಕ ಮಾಡಿ ಪಟ್ಟಿ ನೀಡುವಂತೆ ಚುನಾವಣಾ ಆಯೋಗವು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.

ಇದನ್ನೂ ಓದಿ:PM MODI : ಬ್ಯಾಲೆಟ್ ಪೇಪರ್ ಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಬಿಗ್ ಜೀರೋ, ಮೋದಿ ವ್ಯಂಗ್ಯಾಸ್ತ್ರ

ಕರ್ನಾಟಕ ಪಂಚಾಯತ್ ರಾಜ್ ನಿಯಮಗಳು 1993ರ 6ನೇ ನಿಯಮಕ್ಕೆ ಅನುಗುಣವಾಗಿ ಅಧಿಕಾರಿಗಳ ನೇಮಕಾತಿ ಆಗಬೇಕಿದ್ದು, ಪ್ರತಿ ತಾಲ್ಲೂಕಿಗೆ ಒಬ್ಬ ಸಹಾಯಕ ಆಯುಕ್ತರ ಶ್ರೇಣಿಯ ಅಧಿಕಾರಿಯನ್ನು ಚುನಾವಣಾಧಿಕಾರಿ ಆಗಿ. ದೊಡ್ಡ ಅಥವಾ ಸೂಕ್ಷ್ಮ ಕ್ಷೇತ್ರಗಳಾಗಿದ್ದರೆ ಇಬ್ಬರು ಚುಣಾವಣಾ ಅಧಿಕಾರಿಗಳನ್ನು ಜಿಲ್ಲಾಧಿಕಾರಿಗಳು ನೇಮಕ ಮಾಡಬಹುದಾಗಿರುತ್ತದೆ. ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಪ್ರತಿ 15 ಕ್ಷೇತ್ರಗಳಿಗೆ ಒಬ್ಬ ತಹಶೀಲ್ದಾರ್ ಅಥವಾ ತಹಶೀಲ್ದಾರ್ ಶ್ರೇಣಿಯ ಅಧಿಕಾರಿಯನ್ನು ಚುನಾವಣಾ ಅಧಿಕಾರಿಯನ್ನಾಗಿ ನೇಮಕ ಮಾಡಬಹುದಾಗಿರುತ್ತದೆ.

2016 ರಲ್ಲಿ ಕೊನೆಯ ಬಾರಿಗೆ ಜಿಲ್ಲಾ ಪಂಚಾಯಿತಿ (panchayat elections) ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳು ನಡೆದಿದ್ದವು. ಅದಾದ ಬಳಿಕ ಈ ವರೆಗೆ ಚುನಾವಣಾ ನಡೆದಿಲ್ಲ. ಇದೀಗ 2027ರ ಜನವರಿ ತಿಂಗಳಲ್ಲಿ ಮತ್ತೆ ಚುನಾವಣಡ ನಡೆಸಲಾಗುತ್ತಿದ್ದು, ಕರ್ನಾಟಕ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಹೇಳಿರುವಂತೆ ಡಿಸೆಂಬರ್ ತಿಂಗಳಲ್ಲಿ ಚುಣಾವಣಾ ದಿನಾಂಕ ಘೋಷಿಸುವ ಸಾಧ್ಯತೆ ಇದೆ.