☔ Weather
Bengaluru: ☁️ 21°C | AQI 60
Mysore: ☁️ 22°C | AQI 62
Mangalore: ☁️ 26°C | AQI 70
Bengaluru: ☁️ 21°C | AQI 60

Canara Bank Recruitment 2026: ಕೆನರಾ ಬ್ಯಾಂಕ್‌ನಲ್ಲಿ 3,500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

Canara Bank Recruitment 2026: Apply Online for 3,500 Graduate Apprentice Posts

Canara Bank Recruitment 2026: ಉದ್ಯೋಗಾಕಾಂಕ್ಷಿಗಳಿಗೆ ಕೆನರಾ ಬ್ಯಾಂಕ್‌ನಿಂದ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಬ್ಯಾಂಕ್‌ನಲ್ಲಿ ಖಾಲಿ ಇರುವ ಬೃಹತ್ ಸಂಖ್ಯೆಯ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಒಟ್ಟು 3,500 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ತಕ್ಷಣವೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕದಲ್ಲಿ ಎಷ್ಟು ಹುದ್ದೆಗಳು ಲಭ್ಯ?

ದೇಶಾದ್ಯಂತ ಒಟ್ಟು 3,500 ಹುದ್ದೆಗಳಿಗೆ ಈ ನೇಮಕಾತಿ ಅಭಿಯಾನ ನಡೆಯುತ್ತಿದೆ. ಅದರಲ್ಲೂ ವಿಶೇಷವಾಗಿ ನಮ್ಮ ಕರ್ನಾಟಕ ರಾಜ್ಯದಲ್ಲೇ ಒಟ್ಟು 581 ಹುದ್ದೆಗಳು ಲಭ್ಯವಿವೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?

ಈ ಬೃಹತ್ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು 2026ರ ಅಕ್ಟೋಬರ್ 17 ಕೊನೆಯ ದಿನಾಂಕವಾಗಿದೆ. ಕೊನೆಯ ದಿನಾಂಕದವರೆಗೆ ಕಾಯದೆ ಅರ್ಹ ಅಭ್ಯರ್ಥಿಗಳು ಬೇಗನೆ ಅರ್ಜಿ ಸಲ್ಲಿಸುವುದು ಸೂಕ್ತ.

Canara Bank Recruitment 2026: ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ನೇರ ಲಿಂಕ್ ಹಾಗೂ ಸಂಪೂರ್ಣ ಮಾಹಿತಿಯನ್ನು ಪಡೆಯಲು ಗೂಗಲ್‌ನಲ್ಲಿ ‘Needs Of Public Canara Bank 3500’ ಎಂದು ಹುಡುಕಬಹುದು. ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಲಿಂಕ್ ಬಳಸಿ ಅಗತ್ಯ ದಾಖಲೆಗಳೊಂದಿಗೆ ಸುಲಭವಾಗಿ ಅರ್ಜಿ ಸಲ್ಲಿಸಬಹುದು.