☔ Weather
Bengaluru: ☁️ 21°C | AQI 60
Mysore: ☁️ 22°C | AQI 62
Mangalore: ☁️ 26°C | AQI 70
Bengaluru: ☁️ 21°C | AQI 60

Channagiri Job Fair: ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ‘ಉದ್ಯೋಗ ಮೇಳ’;ಎಲ್ಲಿ? ಯಾವಾಗ?

Channagiri job fair in Davanagere district for ITI and degree students

Channagiri Job Fair: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣದ ಜೊತೆಗೆ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಮತ್ತು ತಾಂತ್ರಿಕ ಜ್ಞಾನ ಹೊಂದಿರುವುದು ಅತ್ಯಂತ ಮಹತ್ವದ್ದಾಗಿದೆ. ಐ.ಟಿ.ಐ. (ITI) ತರಬೇತಿ ಪೂರ್ಣಗೊಳಿಸಿದ ನಂತರ ಕೈಗಾರಿಕೆಗಳು, ವಿವಿಧ ಸಂಸ್ಥೆಗಳು ಮತ್ತು ಸ್ವಯಂ ಉದ್ಯೋಗದ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಪಡೆದ ಕೌಶಲ್ಯ, ಅನುಭವ ಮತ್ತು ಉದ್ಯೋಗಪರ ತರಬೇತಿ ಯುವಕರಿಗೆ ಉತ್ತಮ ಉದ್ಯೋಗ, ಆರ್ಥಿಕ ಸ್ವಾವಲಂಬನೆ ಹಾಗೂ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಹಕಾರಿಯಾಗುತ್ತದೆ.

ಆದ್ದರಿಂದ, ಯುವಜನರು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಮತ್ತು ತಮಗೆ ಅನುಗುಣವಾದ ಕೈಗಾರಿಕಾ ಉದ್ಯೋಗವನ್ನು ಆಯ್ಕೆ ಮಾಡಿಕೊಂಡು, ಕೌಶಲ್ಯಾಭಿವೃದ್ಧಿಯ ಮೂಲಕ “ಕೌಶಲ್ಯದಿಂದ ಉದ್ಯೋಗ, ಉದ್ಯೋಗದಿಂದ ಸ್ವಾವಲಂಬನೆ” ಎಂಬ ಗುರಿಯನ್ನು ಸಾಧಿಸಬೇಕು. ಈ ನಿಟ್ಟಿನಲ್ಲಿ ಚೆನ್ನಗಿರಿಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

‘ಚನ್ನಗಿರಿಯಲ್ಲಿ ಉದ್ಯೋಗ ಮೇಳ’

“ಕೌಶಲ್ಯವೇ ಶಕ್ತಿ – ಉದ್ಯೋಗವೇ ಗುರಿ” ಎಂಬುವುದು ನಮ್ಮ ಸಂಸ್ಥೆಯ ಧ್ಯೇಯ. ಟಿ.ಎಂ.ಎ.ಇ.ಎಸ್ ಶ್ರೀ ಮಹಾರುದ್ರಸ್ವಾಮಿ ಕೈಗಾರಿಕಾ ತರಬೇತಿ ಸಂಸ್ಥೆ, ಚನ್ನಗಿರಿಯಿಂದ ಯುವಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ “ಉದ್ಯೋಗ ಮೇಳ–2026” (ITI Jobs Channagiri) ಆಯೋಜಿಸಲಾಗಿದೆ. ಈ ಉದ್ಯೋಗ ಮೇಳವು SSLC, PUC, ITI, Diploma ಹಾಗೂ Degree ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ತಮ್ಮ ಶೈಕ್ಷಣಿಕ ಅರ್ಹತೆ ಮತ್ತು ಕೌಶಲ್ಯಕ್ಕೆ ಅನುಗುಣವಾದ ಉದ್ಯೋಗಾವಕಾಶಗಳನ್ನು ಪಡೆಯಲು ಉತ್ತಮ ವೇದಿಕೆಯಾಗಿದೆ. ಅರ್ಹ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ ವಿವಿಧ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ಪಡೆದು, ನೇರವಾಗಿ ಉದ್ಯೋಗದಾತರನ್ನು ಸಂಪರ್ಕಿಸುವ ಅವಕಾಶವನ್ನು ಹೊಂದಿರುತ್ತಾರೆ.

ಇದರೊಂದಿಗೆ, ನಮ್ಮ ಚನ್ನಗಿರಿ ತಾಲ್ಲೂಕಿನ ನಿರುದ್ಯೋಗಿ ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸಿ, ಅವರ ಕೌಶಲ್ಯವನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಲು ದಾರಿ ಮಾಡಿಕೊಡುವುದು ಈ ಉದ್ಯೋಗ ಮೇಳದ ಪ್ರಮುಖ ಉದ್ದೇಶವಾಗಿದೆ. ಯುವಜನರು ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಂಡು, ಸೂಕ್ತ ಉದ್ಯೋಗವನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಿ, ತಮ್ಮ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಲಿ ಎಂಬ ಆಶಯವನ್ನು ಹೊಂದಲಾಗಿದೆ.

‘ಚನ್ನಗಿರಿ ಉದ್ಯೋಗ ಮೇಳ’ ಎಲ್ಲಿ? ಯಾವಾಗ?

ಈ ಉದ್ಯೋಗ ಮೇಳವು ದಿನಾಂಕ 06-10-2026 ರಂದು ಬೆಳಿಗ್ಗೆ 10.00 ಗಂಟೆಗೆ ಟಿ.ಎಂ.ಎ.ಇ.ಎಸ್ ಶ್ರೀ ಮಹಾರುದ್ರಸ್ವಾಮಿ ಕೈಗಾರಿಕಾ ತರಬೇತಿ ಸಂಸ್ಥೆ, ಹೊಳಲ್ಕೆರೆ ಮುಖ್ಯ ರಸ್ತೆ, ಚನ್ನಗಿರಿ ಇಲ್ಲಿ ನಡೆಯಲಿದೆ. ವಿವಿಧ ಕೈಗಾರಿಕಾ ಸಂಸ್ಥೆಗಳು ಮೇಳದಲ್ಲಿ ಭಾಗವಹಿಸಿ, ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ.

ಭಾಗವಹಿಸುತ್ತಿರುವ ಕಂಪನಿಗಳು

INDO-MIM, Federal-Mogul, Lumax, Sansera Engineering, DENSO Kirloskar, HHV Thermal Technologies ಹಾಗೂ Hitachi ಸೇರಿದಂತೆ ವಿವಿಧ ಕಂಪನಿಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿವೆ.

ಏನೇನು ದಾಖಲಾತಿಗಳು ಬೇಕು?

ಉದ್ಯೋಗ ಮೇಳಕ್ಕೆ ಹಾಜರಾಗುವ ಅಭ್ಯರ್ಥಿಗಳು ಬಯೋ-ಡೇಟಾ, SSLC ಅಂಕಪಟ್ಟಿ, ITI ಅಂಕಪಟ್ಟಿ, ಆಧಾರ್ ಕಾರ್ಡ್, PAN ಕಾರ್ಡ್ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಕಡ್ಡಾಯವಾಗಿ ತರಬೇಕು. ಯುವಜನರು ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಸೂಕ್ತ ಉದ್ಯೋಗಾವಕಾಶವನ್ನು ಪಡೆದುಕೊಳ್ಳಲು ಈ ಉದ್ಯೋಗ ಮೇಳವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು, ಟಿ.ಎಂ.ಎ.ಇ.ಎಸ್ ಶ್ರೀ ಮಹಾರುದ್ರಸ್ವಾಮಿ ಕೈಗಾರಿಕಾ ತರಬೇತಿ ಸಂಸ್ಥೆ, ಚನ್ನಗಿರಿ ವತಿಯಿಂದ ಮನವಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಟಿ.ಎಂ.ಎ.ಇ.ಎಸ್
ಶ್ರೀ ಮಹಾರುದ್ರಸ್ವಾಮಿ ಕೈಗಾರಿಕಾ ತರಬೇತಿ ಸಂಸ್ಥೆ,
ಹೊಳಲ್ಕೆರೆ ಮುಖ್ಯ ರಸ್ತೆ, ಚನ್ನಗಿರಿ.