Gadag Court Recruitment: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ SSLC ಪಾಸಾದ ಅಭ್ಯರ್ಥಿಗಳಿಗೆ ಗದಗದಿಂದ ಗುಡ್ನ್ಯೂಸ್ ಬಂದಿದೆ. ಗದಗ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 22 ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಸೆಪ್ಟೆಂಬರ್ 28ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ಶೈಕ್ಷಣಿಕ ಅರ್ಹತೆ ಮತ್ತು ವೇತನದ ವಿವರ
ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ನ್ಯಾಯಾಲಯಗಳಲ್ಲಿ ಈ ನೇಮಕಾತಿ ನಡೆಯಲಿದೆ. ಈ ಹುದ್ದೆಗೆ 10ನೇ ತರಗತಿ ಅಥವಾ SSLC ಪಾಸ್ ಆಗಿರುವುದು ಮೂಲ ಅರ್ಹತೆಯಾಗಿದೆ. ಇದರ ಜೊತೆಗೆ ಅಭ್ಯರ್ಥಿಗೆ ಕನ್ನಡ ಓದಲು ಮತ್ತು ಬರೆಯಲು ಕಡ್ಡಾಯವಾಗಿ ತಿಳಿದಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ₹27,000ರಿಂದ ₹46,675ರವರೆಗೆ ಮಾಸಿಕ ವೇತನ ಶ್ರೇಣಿ ನಿಗದಿಯಾಗಿದೆ.
ಇದನ್ನು ಓದಿ: UGNEET 2026: ವೈದ್ಯಕೀಯ 3ನೇ ಸುತ್ತಿನ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ KEA; ಪ್ರಮುಖ ಸೂಚನೆಗಳು
ವಯೋಮಿತಿ ಮತ್ತು ಅರ್ಜಿ ಶುಲ್ಕದ ವಿವರ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗಕ್ಕೆ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. Cat-2A, 2B, 3A, 3B ವರ್ಗಕ್ಕೆ 3 ವರ್ಷ ಹಾಗೂ SC, ST, Cat-1 ವರ್ಗಕ್ಕೆ 5 ವರ್ಷ ಸಡಿಲಿಕೆ ಇರುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹200 ಹಾಗೂ 2A, 2B, 3A, 3B ಅಭ್ಯರ್ಥಿಗಳಿಗೆ ₹100 ಅರ್ಜಿ ಶುಲ್ಕವಿದೆ. SC, ST, Category-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Gadag Court Recruitment: ಅರ್ಜಿ ಸಲ್ಲಿಸುವ ವಿಧಾನ ಮತ್ತು ಆಯ್ಕೆ ಪ್ರಕ್ರಿಯೆ
ಆನ್ಲೈನ್ ಅರ್ಜಿಯಲ್ಲಿ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ನಮೂದಿಸಿ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. 10ನೇ ತರಗತಿಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ 1:10 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಬಳಿಕ ಸಂದರ್ಶನದಲ್ಲಿ ನೀಡುವ ಅಂಕಗಳನ್ನು ಪರಿಗಣಿಸಿ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
ಪ್ರಮುಖ ದಿನಾಂಕಗಳನ್ನು ನೆನಪಿಟ್ಟುಕೊಳ್ಳಿ ಈ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಸಂಖ್ಯೆ 1/2026 ಎಂದು ಉಲ್ಲೇಖಿಸಲಾಗಿದೆ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31, 2026 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಸಲು ನವೆಂಬರ್ 3, 2026 ರವರೆಗೆ ಕಾಲಾವಕಾಶ ನೀಡಲಾಗಿದೆ. ಕೊನೆಯ ದಿನದವರೆಗೆ ಕಾಯದೆ ಅರ್ಹ ಉದ್ಯೋಗಾಕಾಂಕ್ಷಿಗಳು ತಕ್ಷಣವೇ ಅರ್ಜಿ ಸಲ್ಲಿಸುವುದು ಸೂಕ್ತ.




