☔ Weather
Bengaluru: ☀️ 24°C | AQI 112
Mysore: ☀️ 22°C | AQI 135
Mangalore: ☀️ 27°C | AQI 180
Bengaluru: ☀️ 24°C | AQI 112
☔ Weather
Bengaluru: ☀️ 24°C | AQI 112
Mysore: ☀️ 22°C | AQI 135
Mangalore: ☀️ 27°C | AQI 180
Bengaluru: ☀️ 24°C | AQI 112

South Central Railway Recruitment 2026: ಮಾಜಿ ಸೈನಿಕರಿಗೆ ರೈಲ್ವೆ ಇಲಾಖೆಯಲ್ಲಿ 118 ಹುದ್ದೆಗಳ ಭರ್ತಿ

South Central Railway Recruitment 2026: 118 Pointsman Vacancies For Ex Servicemen
ದಕ್ಷಿಣ ಮಧ್ಯ ರೈಲ್ವೆಯಲ್ಲಿ 118 ಪಾಯಿಂಟ್ಸ್ಮನ್ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 18 ಕೊನೆಯ ದಿನವಾಗಿದೆ. ಸಂಪೂರ್ಣ ವಿವರ ಇಲ್ಲಿದೆ.

ದೇಶದ ಗಡಿಯಲ್ಲಿ ಸೇವೆಯನ್ನು ಸಲ್ಲಿಸಿ ನಿವೃತ್ತರಾಗಿರುವ ಮಾಜಿ ಸೈನಿಕರಿಗೆ (South Central Railway Recruitment 2026) ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ದಕ್ಷಿಣ ಮಧ್ಯ ರೈಲ್ವೆ ವಿಭಾಗವು ಮಾಜಿ ಯೋಧರಿಗಾಗಿ ಬಂಪರ್ ಉದ್ಯೋಗಾವಕಾಶವನ್ನು ತಂದಿದೆ.

ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 118 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೊರಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ಪ್ರಕ್ರಿಯೆಯು ನಡೆಯಲಿದೆ.

ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಅರ್ಹ ಮಾಜಿ ಸೈನಿಕರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ.

ಹುದ್ದೆಗಳ ವಿವರ ಮತ್ತು ವಯೋಮಿತಿ

  • ಹುದ್ದೆಯ ಹೆಸರು: ಪಾಯಿಂಟ್ಸ್‌ಮನ್ (Pointsman).
  • ಒಟ್ಟು ಖಾಲಿ ಹುದ್ದೆಗಳು: 118 ಹುದ್ದೆಗಳು.
  • ನೇಮಕಾತಿ ಸ್ವರೂಪ: ಹೊರಗುತ್ತಿಗೆ ಆಧಾರದ ಮೇಲೆ.
  • ಅರ್ಹ ಜಿಲ್ಲೆಗಳು: ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಮಾಜಿ ಸೈನಿಕರಿಗೆ ಅವಕಾಶ.
  • ವಯೋಮಿತಿ: ಅರ್ಜಿ ಸಲ್ಲಿಸುವ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಗರಿಷ್ಠ 54 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಕೆ ಮಾದರಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಆನ್‌ಲೈನ್ ವ್ಯವಸ್ಥೆ ಇರುವುದಿಲ್ಲ.
  • ಸಲ್ಲಿಕೆ ಮಾಡುವ ಸ್ಥಳ: ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಖುದ್ದಾಗಿ ಶಿವಮೊಗ್ಗದ ‘ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿ’ಗೆ ತೆರಳಿ ಸಲ್ಲಿಸಬೇಕು.
  • ಅಗತ್ಯ ದಾಖಲೆಗಳು: ಮಾಜಿ ಸೈನಿಕರ ಸೇವಾ ಪ್ರಮಾಣಪತ್ರ, ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಗೂ ಇತರೆ ವೈಯಕ್ತಿಕ ದಾಖಲೆಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಇದನ್ನು ಓದಿ: Nanjangud Court Recruitment 2026: ನಂಜನಗೂಡು ಕೋರ್ಟ್ ಆವರಣದಲ್ಲಿ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ

South Central Railway Recruitment 2026: ಪ್ರಮುಖ ದಿನಾಂಕಗಳು ಮತ್ತು ಸಂಪರ್ಕ ಮಾಹಿತಿ

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 18, 2026.
  • ಹೆಚ್ಚಿನ ಮಾಹಿತಿಗಾಗಿ: ಕಚೇರಿಯ ಕೆಲಸದ ವೇಳೆಯಲ್ಲಿ 08182-220925 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
  • ಸೂಚನೆ: ಸಮಯ ಕಮ್ಮಿ ಇರುವುದರಿಂದ ನಿಗದಿತ ದಿನಾಂಕದೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸೈನಿಕ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಡಾ. ಸಿ.ಎ. ಹಿರೇಮಠ ತಿಳಿಸಿದ್ದಾರೆ.