☔ Weather
Bengaluru: ☀️ 24°C | AQI 113
Mysore: ☀️ 22°C | AQI 110
Mangalore: ☀️ 27°C | AQI 172
Bengaluru: ☀️ 24°C | AQI 113
☔ Weather
Bengaluru: ☀️ 24°C | AQI 113
Mysore: ☀️ 22°C | AQI 110
Mangalore: ☀️ 27°C | AQI 172
Bengaluru: ☀️ 24°C | AQI 113

SONIA GANDHI : ಸೋನಿಯಾ ಆತ್ಮಕಥೆ ಬಿಡುಗಡೆ: ದೆಹಲಿಯತ್ತ ಸಿದ್ದು & ಡಿಕೆ

Image of Sonia Gandhi book
ಸೋನಿಯಾ ಗಾಂಧಿ (Sonia Gandhi) ಆತ್ಮಕಥನ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಡಿ.ಕೆ. ಶಿವಕುಮಾರ್ & ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ.

ಮುಖ್ಯಾಂಶಗಳು

  • ಬಿಲಾಂಗಿಂಗ್- ಎ ಜರ್ನಿ ಆಫ್ ಲವ್
  • ಸೋನಿಯಾ ಗಾಂಧಿ ಆತ್ಮಕಥನ ಬಿಡುಗಡೆ
  • ದೆಹಲಿಯತ್ತ ಡಿಕೆ & ಸಿದ್ದು

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರ ಆತ್ಮಕಥನ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳುತ್ತಿದ್ದಾರೆ. ನವದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ಸಂಜೆ 6:30ಕ್ಕೆ ಸೋನಿಯಾ ಗಾಂಧಿ ಅವರ ಬಿಲಾಂಗಿಂಗ್ ಎ ಜರ್ನಿ ಆಫ್ ಲವ್ ಪುಸ್ತಕವನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ಇಟಲಿಯಿಂದ ಭಾರತಕ್ಕೆ ಬಂದು ರಾಜಕೀಯ ಜೀವನದಲ್ಲಿ ಅವರು ಸಾಗಿದ ಹಾದಿ, ವೈಯಕ್ತಿಕ ಬದುಕಿನ ಅನುಭವಗಳು ಹಾಗೂ ನಿರ್ಣಾಯಕ ಘಟ್ಟಗಳನ್ನು ಈ ಕೃತಿಯಲ್ಲಿ ದಾಖಲಿಸಲಾಗಿದೆ. ಈಗಾಗಲೇ ರಾಷ್ಟ್ರಮಟ್ಟದಲ್ಲಿ ಈ ಪುಸ್ತಕದ ಬಗ್ಗೆ ಸಾಕಷ್ಟು ಚರ್ಚೆ ಹಾಗೂ ಕುತೂಹಲ ಮೂಡಿದೆ. ಸೋನಿಯಾ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಂದ ಸಿದ್ದರಾಮಯ್ಯ ಅವರಿಗೆ ವಿಶೇಷ ಆಹ್ವಾನ ಬಂದಿದ್ದು, ಅವರು ಮಧ್ಯಾಹ್ನ 12 ಗಂಟೆ ಸುಮಾರಿಗೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಕೂಡ ಇದೇ ಸಮಾರಂಭದಲ್ಲಿ ಭಾಗವಹಿಸಲಿದ್ದು, ಇಬ್ಬರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಇಬ್ಬರು ನಾಯಕರು ಪ್ರತ್ಯೇಕವಾಗಿ ದೆಹಲಿಗೆ ಪ್ರಯಾಣಿಸುತ್ತಿರುವುದು ಗಮನ ಸೆಳೆದಿದೆ.

ಸಂಪುಟ ವಿಸ್ತರಣೆ ಚರ್ಚೆ ..?

ದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಪ್ರಮುಖವಾಗಿ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸುವ ಕುರಿತು ವರಿಷ್ಠರೊಂದಿಗೆ ವಿಸ್ತೃತವಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ. ದೆಹಲಿಯಲ್ಲಿ ಎರಡು ಪ್ರಮುಖ ಕಾರ್ಯಕ್ರಮಗಳಿಗೆ ಸಮಯ ಮೀಸಲಿಟ್ಟಿರುವ ಮುಖ್ಯಮಂತ್ರಿಗಳು ಪುಸ್ತಕ ಬಿಡುಗಡೆ ಸಮಾರಂಭ ಸೇರಿದಂತೆ ನಿಗದಿತ ಕಾರ್ಯಕ್ರಮಗಳನ್ನು ಮುಗಿಸಿದ ಬಳಿಕ ರಾತ್ರಿ 9:55ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಇದನ್ನೂ ಓದಿ : ವಿದೇಶದಲ್ಲಿ ಭಾರತವನ್ನು ದೂಷಿಸಿದರೆ ಅಧಿಕಾರ ಸಿಗುವುದಿಲ್ಲ: ರಾಹುಲ್‌ಗೆ ಶಾ ಎಚ್ಚರಿಕೆ

ಈ ದೆಹಲಿ ಭೇಟಿ ಕೇವಲ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸೀಮಿತವಾಗಿಲ್ಲ. ರಾಜ್ಯದಲ್ಲಿ ಸಂಪುಟ ಹಾಗೂ ನಿಗಮ ಮಂಡಳಿ ನೇಮಕಾತಿ ವಿಚಾರ ಸಾಕಷ್ಟು ದಿನಗಳಿಂದ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಜೊತೆಗಿನ ಈ ಮಾತುಕತೆಗೆ ಹೆಚ್ಚಿನ ಮಹತ್ವ ಬಂದಿದೆ. ಒಂದೆಡೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಪಕ್ಷದಲ್ಲಿ ಒಗ್ಗಟ್ಟಿನ ಸಂದೇಶ ನೀಡುವ ಪ್ರಯತ್ನವಾದರೆ, ಮತ್ತೊಂದೆಡೆ ಪ್ರತ್ಯೇಕ ಪ್ರಯಾಣ ರಾಜ್ಯ ರಾಜಕಾರಣದಲ್ಲಿ ಇಬ್ಬರ ನಡುವಿನ ಅಂತರದ ಬಗ್ಗೆ ಮತ್ತೆ ಚರ್ಚೆಗೆ ಕಾರಣವಾಗಿದೆ. ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ವೇದಿಕೆ ರಾಷ್ಟ್ರೀಯ ನಾಯಕರ ಸಮ್ಮಿಲನಕ್ಕೆ ಸಾಕ್ಷಿಯಾಗಲಿದ್ದು, ಅದರ ನೆರಳಿನಲ್ಲಿ ರಾಜ್ಯ ಕಾಂಗ್ರೆಸ್‌ನ ಮುಂದಿನ ರಾಜಕೀಯ ಲೆಕ್ಕಾಚಾರಗಳು ನಿರ್ಧಾರವಾಗುವ ಸಾಧ್ಯತೆ ಇದೆ.