Photo Credits: @sagar_notification_official (Instagram)
ಸಂಕ್ಷಿಪ್ತ ವಿವರಣೆ: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (K-SET 2026) ಅಧಿಕೃತ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕರ್ನಾಟಕದ ವಿಶ್ವವಿದ್ಯಾಲಯಗಳು ಮತ್ತು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಲು (Assistant Professor) ಬಯಸುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ. ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (K-SET 2026) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಆಗಸ್ಟ್ 10, 2026 ರಿಂದ ಸೆಪ್ಟೆಂಬರ್ 05, 2026 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು…
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-08-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-09-2026
- K-SET ಪರೀಕ್ಷಾ ದಿನಾಂಕ: 11-10-2026

Photo Credits: @sagar_notification_official (Instagram)
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು; ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಈ ಕೆಳಗಿನ ದಾಖಲೆಗಳನ್ನು ಸಿದ್ಧವಿಟ್ಟುಕೊಳ್ಳಬೇಕು…
- SSLC ಅಂಕಪಟ್ಟಿ
- PUC ಅಂಕಪಟ್ಟಿ
- ಪದವಿ ಅಂಕಪಟ್ಟಿ
- ಸ್ನಾತಕೋತ್ತರ ಅಂಕಪಟ್ಟಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- HK (KK) ಸರ್ಟಿಫಿಕೇಟ್
- ಪಾಸ್‌ಪೋರ್ಟ್ ಸೈಜ್ ಫೋಟೋ
- ಅಭ್ಯರ್ಥಿಯ ಸಹಿ
- ಎಡಗೈನ ಹೆಬ್ಬೆರಳ ಗುರುತು
ಶೈಕ್ಷಣಿಕ ಅರ್ಹತೆ…
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ (Post Graduation / PG) ಪೂರ್ಣಗೊಳಿಸಿರಬೇಕು.




